ಮೈಸೂರು: ಮೈಸೂರು ನಗರ ಹಾಗೂ ಇತರ ಪ್ರದೇಶಗಳಲ್ಲಿರುವ ಕೆರೆಗಳನ್ನು ಯಾರೂ ಒತ್ತುವರಿ ಮಾಡಿಕೊಳ್ಳದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದರು.
ಕೆರೆಗಳ ಸಂರಕ್ಷಣೆಯ ಸಂಬಂಧ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದರು.
ಕರೆಗಳ ಬಫರ್ ಜೋನ್ ಗುರುತಿಸಬೇಕು. ಗಡಿಯನ್ನು ಗುರುತಿಸಬೇಕು. ಅಗತ್ಯವಿದ್ದರೆ ಭೂದಾಖಲೆಗಳ ಉಪನಿರ್ದೇಶಕರಿಗೆ ತಿಳಿಸಿ, ಅಳತೆ ಕಾರ್ಯ ಮಾಡಿಸಬೇಕು. ಕೆರೆಗಳ ಆಸ್ತಿಯನ್ನು ಉಳಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಕಾವೇರಿ ನೀರಾವರಿ ನಿಗಮ, ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಮುಂತಾದ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಅಪರ ಜಿಲ್ಲಾಧಿಕಾರಿ ಬಿ.ಎಸ್. ಮಂಜುನಾಥಸ್ವಾಮಿ ಉಪಸ್ಥಿತರಿದ್ದರು.