ಮೈಸೂರು: ಶಾಸಕ ಜಿ.ಟಿ.ದೇವೇಗೌಡರೇ ನಮ್ಮ ನಾಯಕರು ಎಂದು ಶಾಸಕ ಸಾ. ರಾ. ಮಹೇಶ್ ಹೇಳಿದರು.
ನಗರದಲ್ಲಿ ಶುಕ್ರವಾರ ಶಾಸಕರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮುಂದಿನ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡರೇ ಮೈಸೂರು ಭಾಗದ ನಾಯಕತ್ವ ವಹಿಸಿಕೊಳ್ಳುತ್ತಾರೆ. ಅವರೇ ನಮ್ಮ ನಾಯಕರು ಎಂದರು.
ಅಪ್ಪ ಮತ್ತು ಮಗ ಇಬ್ಬರೂ ಜೆಡಿಎಸ್ ನಿಂದಲೇ ಸ್ಪರ್ಧೆ ಮಾಡಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಅವರು ಜೆಡಿಎಸ್ ನಲ್ಲೇ ಇರುತ್ತಾರೆ ಎಮದು ಸಾ.ರಾ.ಮಹೇಶ್ ತಿಳಿಸಿದರು.
ಚುನಾವಣೆ ಬಂದ ತಕ್ಷಣ ನಾವೆಲ್ಲ ಒಂದಾಗುತ್ತೇವೆ. ಬೇರೆಯವರ ರೀತಿ ಭಿನ್ನಾಭಿಪ್ರಾಯಗಳನ್ನು ಒಳಗಡೆ ಇಟ್ಟುಕೊಳ್ಳುವುದಿಲ್ಲ. ಹೊರಗಡೆ ಮಾತನಾಡಿ ಎಲ್ಲವನ್ನೂ ಸರಿಪಡಿಸಿಕೊಳ್ಳುತ್ತೇವೆ ಎಂದು ಸಾರಾ ಮಹೇಶ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು ಜಿ.ಟಿ.ದೇವೇಗೌಡರನ್ನು ಉಚ್ಛಾಟಿಸುತ್ತೇವೆ ಎಂದು ಕುಮಾರಣ್ಣ ಆಗಲಿ, ನಾನಾಗಲಿ ಎಲ್ಲಿಯೂ ಹೇಳಿಲ್ಲ. ಜಿ.ಟಿ.ದೇವೇಗೌಡರು ಸಿಎಂ ಆಗಿದ್ದವರನ್ನೇ ಸೋಲಿಸಿದ ದೊಡ್ಡ ರಾಜಕೀಯ ಶಕ್ತಿ. ಅವರನ್ನು ನಾವ್ಯಾಕೆ ಉಚ್ಛಾಟಿಸುತ್ತೇವೆ ಎಂದರು.