ಮೈಸೂರು: ಶಾಸಕ ಸಾರಾ ಮಹೇಶ್ ಅವರಿಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾಸ್ಕ್ ಪಾಠ ಮಾಡಿದ್ದಾರೆ.
ಈ ಘಟನೆ ನಡೆದಿದ್ದು ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ.
ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಬುಧವಾರ ವಿಧಾನ ಮಂಡಲ ಕಾಗದ ಪತ್ರಗಳ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಸಾ.ರಾ ಮಹೇಶ್ ಉಪಸ್ಥಿತರಿದ್ದರು.
ಈ ಸಭೆಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರೂ ಸಹ ಆಗಮಿಸಿದ್ದರು.
ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾಸ್ಕ್ ಹಾಕಿಕೊಂಡು ಮಾತನಾಡಿದರು.
ಸಾರಾ ಮಹೇಶ್ ಅವರು, ನಿಮ್ಮ ಮಾತು ಕೇಳುತ್ತಿಲ್ಲ, ಮಾಸ್ಕ್ ತೆಗೆದು ಮಾತನಾಡಿ ಎಂದರು.
ಆಗ ಡಿಸಿ ರೋಹಿಣಿ ಸಿಂಧೂರಿ ಅವರು ನಾನು ಮಾಸ್ಕ್ ತೆಗೆಯವುದಿಲ್ಲ. ಮಾಸ್ಕ್ ತೆಗೆದು ಮಾತನಾಡಬಾರದು. ಅದಕ್ಕಾಗಿ ಮಾಸ್ಕ್ ತೆಗೆಯುವುದಿಲ್ಲ ಎಂದು ಹೇಳಿದರು.
ಈ ಸಭೆಯಲ್ಲಿ ನನಗೆ ಸಂಬಂಧಿಸಿದ ವಿಷಯಗಳ ಚರ್ಚೆ ಇಲ್ಲ. ಹಾಗಾಗಿ ನೀವು ಅನುಮತಿ ನೀಡಿದರೆ ನಾನು ಸಭೆಯಿಂದ ತೆರಳುತ್ತೇನೆ ಎಂದು ರೋಹಿಣಿ ಸಿಂಧೂರಿ ತಿಳಿಸಿದರು.
ಶಾಸಕ ಸಾ.ರಾ ಮಹೇಶ್ ಅವರು, ಸಮಯ ಇದ್ದರೆ ಇರಿ, ಬೇರೆ ಕೆಲಸ ಇದ್ದರೆ ಹೋಗಿ ಎಂದು ಡಿಸಿ ಅವರಿಗೆ ಸಾ.ರಾ ಮಹೇಶ್ ಹೇಳಿದರು.
ಸಾರಾ ಮಹೇಶ್ ಈ ರೀತಿ ಹೇಳುತ್ತಿದ್ದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಕ್ಷಣವೇ ಸಭೆಯಿಂದ ಹೊರನಡೆದರು.