ಯಾದಗಿರಿ: ಇದೀಗ ಬಿಜೆಪಿಗೆ ಇತಿಹಾಸ ನಿರ್ಮಾಣ ಮಾಡುವ ದಿನಗಳಿದ್ದು, ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುವುದು ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಹಕಾರಿಯಾಗಲಿದೆ ಎಂದು ಕೈಗಾರಿಕೆ ಸಚಿವ ಜಗದಿಶ ಶೆಟ್ಟರ್ ಹೇಳಿದರು.
ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಜನ ಸೇವಕ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿನ 5670 ಗ್ರಾ.ಪಂ.ಗಳಲ್ಲಿ 86183 ಸದಸ್ಯರಲ್ಲಿ ಬಿಜೆಪಿ ಬೆಂಬಲಿತ 45246 ಅಭ್ಯರ್ಥಿಗಳು ಆರಿಸಿ ಬಂದಿದ್ದು ದೊಡ್ಡ ಶಕ್ತಿ ಲಭಿಸಿದೆ ಎಂದು ಹೇಳಿದರು.
ಯಾದಗಿರಿ ಜಿಲ್ಲೆಯಲ್ಲಿ 115 ಗ್ರಾ.ಪಂ.ಗಳಲ್ಲಿ 1271 ಬಿಜೆಪಿ ಬೆಂಬಲಿತ ಸದಸ್ಯರು ಗೆಲುವು ಸಾಧಿಸಿದ್ದು 60 ಗ್ರಾ.ಪಂ.ಗಳಲ್ಲಿ ಬಹುಮತ ಪಡೆದಿದೆ ಎಂದರು.
ಕೇಂದ್ರ ಸರ್ಕಾರವೇ ನೇರವಾಗಿಅನುದಾನ ನೀಡಲಿದೆ. ಜನಪ್ರತಿನಿಧಿಗಳು ಗ್ರಾಮಗಳನ್ನು ಆದರ್ಶ ಗ್ರಾಮಗಳನ್ನಾಗಿ ಮಾಡಲು ಪಣತೊಡಬೇಕುಎಂದು ಕಿವಿ ಮಾತು ಹೇಳಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ವೆಂಕಟರೆಡ್ಡಿ ಮುದ್ನಾಳ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್, ಮಾಜಿ ಸಚಿವರೂ ನಿಜ ಶರಣ ಅಂಬಿರಗಚೌಡಯ್ಯ ನಿಗಮದ ಅಧ್ಯಕ್ಷ ಬಾಬು ರಾವ್ ಚಿಂಚನಸೂರ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ, ಬಿಜೆಪಿ ಯುವ ರಾಜ್ಯಾಧ್ಯಕ್ಷ ಡಾ. ಸಂದೀಪ ಕುಮಾರ, ಸಂಸದ ಡಾ. ಉಮೇಶಜಾಧವ್, ಸಚಿವ ಪ್ರಭುಚವ್ಹಾಣ ಮಾತನಾಡಿದರು.
ಇದೇ ಸಂದರ್ಭದಲ್ಲಿ ನೂತನ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೂ ಮಳೆಗೈಯುವ ಮೂಲಕ ನಾಯಕರು ಅಭಿನಂದಿಸಿದರು.