ದಾವಣಗೆರೆ: ಮಹಾರಾಷ್ಟ್ರ ಸಿಎಂ ಹೇಳಿಕೆ ಅವಿವೇಕಿತನದ್ದು ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ದಾವಣಗೆರೆಯಲ್ಲಿ ಸೋಮವಾರ ಡಿಸಿಎಂ ಸವದಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಬೆಳಗಾವಿ ನಿಪ್ಪಾಣಿಯನ್ನ ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ಸಿದ್ದ ಎಂಬ ಮಹಾರಾಷ್ಟ್ರ ಸಿಎಂಗೆ ಎದುರೇಟು ನೀಡಿದ ಡಿಸಿಎಂ ಸವದಿ, ಎಂದೆಂದಿಗೂ ಅವು ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಯಾವುದೇ ಕಾರಣಕ್ಕು ಅದು ಸಾಧ್ಯವಿಲ್ಲ ಎಂದರು.
ಸಿಎಂ ಏನಾದರೂ ಹೇಳುವಾಗ ಎಚ್ಚರಿಕೆ ಇರಬೇಕು, ಸಾವಿರ ಜನ ಸಿಎಂ ಬಂದರೂ ಬೆಳಗಾವಿ ಕರ್ನಾಟಕದಲ್ಲೇ ಇರುತ್ತೆ ಎಂದು ಸವದಿ ಹೇಳಿದರು.
ಹಿರಿಯರು ಸಚಿವ ಸ್ಥಾನ ತ್ಯಾಗ ಮಾಡಬೇಕು ಎಂಬ ರೇಣುಕಾಚಾರ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸವದಿ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಕೇಳುವುದನ್ನು ಪಕ್ಷದ ಚೌಕಟ್ಟಿನಲ್ಲಿ ಕೇಳಲಿ ಎಂದು ಸವದಿ ತಿಳಿಸಿದರು.
ಸಚಿವ ಸ್ಥಾನಗಳು ಕೇವಲ ಬೆಂಗಳೂರು, ಬೆಳಗಾವಿಗೆ ಸೀಮಿತವಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸವದಿ, ಸ್ವಂತ ಬಲದ ಮೇಲೆ ಪಕ್ಷ ಅಧಿಕಾರಕ್ಕೆ ಬಂದಿಲ್ಲ, ಸಮ್ಮಿಶ್ರ ಸರ್ಕಾರದ ರಾಜೀನಾಮೆ ನೀಡಿದವರಿಂದ ಸರ್ಕಾರಕ್ಕೆ ಅಧಿಕಾರಕ್ಕೆ ಬಂತು. ಭರವಸೆ ನೀಡಿದಂತೆ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಪ್ರದೇಶವಾರು ಸಚಿವ ಸ್ಥಾನದ ಚಿಂತನೆ ನಡೆಯಲಿದೆ ಎಂದು ಲಕ್ಷ್ಮಣ ಸವದಿ ಹೇಳಿದರು.