ಮುಡಾ ನಿವೇಶನ ಅಭಿವೃದ್ಧಿ: ಒನ್ ಟೈಂ ಸೆಟ್ಲಮೆಂಟ್ ಮಾದರಿ ಪ್ರಸ್ತಾವನೆ -ಸಚಿವ ಎಸ್.ಟಿ.ಎಸ್

ಮೈಸೂರು: ಮೈಸೂರು ನಗರಾಭಿವೃದ್ಧಿ ನಿಟ್ಟಿನಲ್ಲಿ ಮುಡಾಕ್ಕೆ ಇರುವ ಅಡೆತಡೆಯನ್ನು ತೊಡೆದು ಹಾಕುವ ವಿಷಯದಲ್ಲಿ ಈ ಬಗ್ಗೆ ಸಮಗ್ರ ವರದಿ ತಯಾರಿಸಿ ವರದಿ ಸಿದ್ಧಪಡಿಸಿದರೆ ಒನ್ ಟೈಂ ಸೆಟ್ಲಮೆಂಟ್ ಗೆ ಅವಕಾಶ ಕಲ್ಪಿಸುವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.
ನಗರದ ವಿಜಯನಗರ ಬಡಾವಣೆಯನ್ನು ಸಚಿವರು ಮಂಗಳವಾರ ಪರಿಶೀಲಿಸಿದ ಮಾತನಾಡಿದರು.
ಒಂದು ವೇಳೆ ಈಗಿರುವ ಅಡೆತಡೆಗಳನ್ನು ತೆಗೆದರೆ ಬಹುತೇಕ ಎಲ್ಲ ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರ ಸಿಗಲಿದೆ. ಅಲ್ಲದೆ, ವಿಜಯನಗರ ಬಡಾವಣೆಯನ್ನು ಕಾಪೆರ್Çೀರೇಶನ್ ಗೆ ಸೇರಿಸಬೇಕು ಎಂಬ ವಿಷಯದ ಬಗ್ಗೆ ಈಗಾಗಲೇ ಸಭೆಗಳನ್ನು ನಡೆಸಲಾಗಿದೆ. ಒಟ್ಟಾರೆಯಾಗಿ ಮೈಸೂರಿನ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಎಸ್.ಟಿ.ಎಸ್. ತಿಳಿಸಿದರು.
ಈಗಾಗಲೇ ಇರುವ ನಿವೇಶನಗಳನ್ನು ಮಾರಾಟ ಮಾಡಿದಾಗ ಬರುವ ಹಣವನ್ನು ಮುಡಾ ವ್ಯಾಪ್ತಿಯಲ್ಲಿರುವ ಬಡಾವಣೆಗಳಿಗೆ ಖರ್ಚು ಮಾಡಿದರೆ, ಅಭಿವೃದ್ಧಿಯಾಗತ್ತದೆ ಎಂದರು.
ಈ ಬಗ್ಗೆ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜು ಅವರ ಜೊತೆಯೂ ಚರ್ಚಿಸಲಾಗಿದೆ. ಜೊತೆಗೆ ಅವರ ಜೊತೆ ಇತರ ಸಮಸ್ಯೆಗಳ ಬಗ್ಗೆಯೂ 2 ಸುತ್ತಿನ ಸಭೆಗಳನ್ನೂ ನಡೆಸಲಾಗಿದೆ ಎಂದು ಸಚಿವ ಸೋಮಶೇಕರ್ ತಿಳಿಸಿದರು.
ಒಂದೇ ಬಾರಿ ಬಡಾವಣೆಗಳ ಎಲ್ಲ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರ ವಿಶ್ವಾಸ ಪಡೆದು, ವರದಿ ಸಿದ್ಧಪಡಿಸಿ ಇದೊಂದು ರೀತಿಯಲ್ಲಿ ಒನ್ ಟೈಂ ಸೆಟ್ಲಮೆಂಟ್ ಇದ್ದಹಾಗೆ. ಆದರೆ, ಅಧಿಕಾರಿಗಳು ಸ್ಥಳಕ್ಕೆ ದಾವಿಸಿ ಕೂಲಂಕಷವಾಗಿ ಅಧ್ಯಯನ ಮಾಡಿ ಸಮಸ್ಯೆಗಳಾಗದಂತೆ ಪ್ಲಾನ್ ತಯಾರಿಸಬೇಕು. ಒಮ್ಮೆ ಒಪ್ಪಿಗೆ ಪಡೆದ ಮೇಲೆ ಮತ್ತೆ ಸಮಸ್ಯೆಗಳು ಉದ್ಭವವಾಗದಂತೆ ನೋಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ದೇವಸ್ಥಾನಗಳನ್ನು ಒಡೆಯುವುದನ್ನು ನಾವು ಒಪ್ಪಲ್ಲ. ಬೆಂಗಳೂರಿನಲ್ಲಿಯೂ ಇಂತಹದ್ದನ್ನು ನಾವು ಮಾಡಲ್ಲ. ಧಾರ್ಮಿಕ ಭಾವನೆಗಳಿಗೆ ಬೆಲೆ ಕೊಡೋಣ. ಬಡಾವಣೆಗಳವರೇ ದುಡ್ಡು ಹಾಕಿ ನಿರ್ವಹಣೆ ಮಾಡಿಕೊಂಡು ಹೋಗುತ್ತಿರುವ ದೇವಸ್ಥಾನಗಳನ್ನು ಒಡೆಯುವ ಕೆಲಸ ಆಗಬಾರದು. ಈ ಬಗ್ಗೆ ನನಗೆ ದೂರುಗಳು ಬಂದಿವೆ. ಮುಂದೆ ಹೀಗಾಗಬಾರದು ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರಿಗೆ ಸಮಸ್ಯೆಗಳ ಬಗ್ಗೆ ಅರಿವಿದೆ. ಅವರು ಪಕ್ಷಾತೀತವಾಗಿ ಅಭಿವೃದ್ಧಿಗೆ ಕೈಜೋಡಿಸುತ್ತಾರೆ. ಯಾವ ಪಕ್ಷದ ಶಾಸಕರು ಕರೆದರೂ ಸರಿಯಾದ ಸಮಯಕ್ಕೆ ಬಂದು ಸಹಕಾರ ನೀಡುತ್ತಾರೆ ಎಂದು ಸಂತಸ ವ್ಯಕ್ತಪಡಿಸಿದರು.