ಮೈಸೂರು: ಪತ್ರಕರ್ತರ ಸೋಗಿನಲ್ಲಿ ವೈದ್ಯರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರು ಯುವತಿಯರನ್ನು ನಗರದ ಮಂಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಮ್ರೀನ್, ಆಯಿಷಾ ಬಾಯಿ, ಶಹೀನಾ ನವೀದ್ ಬಂಧಿತ ಯುವತಿಯರು.
ಬಂಧಿತರು ಮಾಧ್ಯಮ, ಮಾನವ ಹಕ್ಕುಗಳ ಹೆಸರಿನಲ್ಲಿ ಕೆ.ಆರ್.ಆಸ್ಪತ್ರೆ ವೈದ್ಯ ಡಾ.ರಾಜೇಶ್ ಅವರನ್ನು ಹೆದರಿಸಿ ಲಕ್ಷಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಕೆ.ಆರ್.ಆಸ್ಪತ್ರೆ ವೈದ್ಯ ಡಾ.ರಾಜೇಶ್ ಅವರಿಗೆ ಈ ಮೂವರು ಯುವತಿಯರು ತಾವು ಪತ್ರಕರ್ತರು, ಮಾನವ ಹಕ್ಕುಗಳ ಹೋರಾಟಗಾರರು ಎಂದು ಹೇಳಿ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲು ನೀವು ರೋಗಿಗಳಿಂದ ಹಣ ಪಡೆಯುತ್ತಿದ್ದೀರಿ. ಅದಕ್ಕೆ ಸಂಬಂಧಪಟ್ಟ ವಿಡಿಯೋ ಸಾಕ್ಷಿಗಳು ನಮ್ಮ ಬಳಿ ಇವೆ ಎಂದು ಯುವತಿಯರು ಬೆದರಿಸಿದ್ದರು.
ಈ ಪ್ರಕರಣ ಮುಚ್ಚಿಹಾಕಲು 5 ಲಕ್ಷ ರೂ. ನೀಡುವಂತೆ ಆಗ್ರಹಿಸಿ 50 ಸಾವಿರ ರೂಪಾಯಿ ಪಡೆದಿದ್ದರು.
ಉಳಿದ ಹಣ ನೀಡುವಂತೆ ಒತ್ತಾಯಿಸಿ ಮಂಡಿ ಮೊಹಲ್ಲಾದ ಸಂಜೀವಿನಿ ಆಸ್ಪತ್ರೆ ಎದುರು ಗಲಾಟೆ ಮಾಡಿದ್ದರು ಎನ್ನಲಾಗಿದೆ.
ಇದರಿಂದ ಬೇಸರಗೊಂಡ ಡಾ. ರಾಜೇಶ್ ಮಂಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಪೆÇಲೀಸರು ತನಿಖೆ ನಡೆಸಿದಾಗ ಈ ಮೂವರು ಯುವತಿಯರು ನಕಲಿ ಗುರುತಿನ ಚೀಟಿಗಳನ್ನು ಬಳಸಿಕೊಂಡು ಬ್ಲ್ಯಾಕ್ ಮೇಲ್ ಮಾಡಿರುವುದು ಸಾಬೀತಾಗಿದೆ ಎಂದು ಡಿಸಿಪಿ ಡಾ. ಎ. ಎನ್. ಪ್ರಕಾಶ್‍ಗೌಡ ಅವರು ತಿಳಿಸಿದ್ದಾರೆ.
ಸುವರ್ಣ ಕಾವೇರಿ ಎಕ್ಸ್‍ಪ್ರೆಸ್ ಸುದ್ದಿವಾಹಿನಿಯಲ್ಲಿ ರಾಜಕೀಯ ವರದಿಗಾರ್ತಿ ಆಯಿಷಾ ಬಾಯಿ, ಕ್ರೈಂ ವರದಿಗಾರ್ತಿ ಅಮ್ರೀನ್ ಎಂದು ಹೇಳಿಕೊಂಡಿದ್ದರು. ಆದರೆ ಮೈಸೂರಿನಲ್ಲಿ ಸುವರ್ಣ ಕಾವೇರಿ ಎಕ್ಸ್‍ಪ್ರೆಸ್ ಎನ್ನುವ ಮಾಧ್ಯಮ ಸಂಸ್ಥೆಯೇ ಇಲ್ಲ. ಸಿಟಿಜನ್ ಲೇಬರ್ ವೆಲ್‍ಫೇರ್ ಎನ್ನುವ ಸಾಂವಿಧಾನಿಕ ಸಂಸ್ಥೆಯೂ ಇಲ್ಲ. ಮೋಸ ಮಾಡುವ ಉದ್ದೇಶದಿಂದ ನಕಲಿ ಐಡಿ ಕಾರ್ಡ್‍ಗಳ ಬಳಕೆ ಮಾಡಿರುವುದು ಪೊಲೀಸರ ತನಿಖೆಯಿಂದ ಸಾಬೀತಾಗಿದೆ.