ಬೆಂಗಳೂರು: ಜನಪರ ಧ್ವನಿಯೆತ್ತಿದ ಖ್ಯಾತ ಸಾಹಿತಿ, ಸಂಶೋಧಕ ಹಂ.ಪ. ನಾಗರಾಜಯ್ಯ ವಿರುದ್ಧ ಪೆÇಲೀಸ್ ಕ್ರಮ ಕೈಗೊಂಡ ರಾಜ್ಯ ಬಿಜೆಪಿ ಸರಕಾರದ ನಡೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಖಂಡಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಡಿಕೆಶಿ, ಕೇಂದ್ರ ಸರಕಾರವನ್ನು ಟೀಕಿಸಿದರು ಎಂಬ ಏಕೈಕ ಕಾರಣಕ್ಕಾಗಿ ಹಂಪನಾ ಅವರನ್ನು ಮಂಡ್ಯ ಪೆÇಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಹಾಗೂ ಕೀಚಕ ನಡೆಯ ಪ್ರತೀಕ ಎಂದಿದ್ದಾರೆ.
ಹಂಪನಾ ಅವರು ಈ ನಾಡು ಕಂಡ ಶ್ರೇಷ್ಠ ಭಾಷಾ ವಿಜ್ಞಾನಿ ಅಂತಹವರ ಧ್ವನಿ ಅಡಗಿಸಲು ರಾಜ್ಯ ಸರಕಾರ ಮುಂದಾದದ್ದು ನಾಚಿಕೆಗೇಡಿನ ಸಂಗತಿ ಎಂದು ಅವರು ಹೇಳಿದ್ದಾರೆ.
ತಮ್ಮ ವಿರುದ್ಧ ಧ್ವನಿ ಎತ್ತುವ ರಾಜಕೀಯ ವಿರೋಧಿಗಳ ವಿರುದ್ಧ ಹಗೆತನ ಸಾಧಿಸುವ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಇದೀಗ ಸಾಹಿತಿಗಳನ್ನೂ ಆ ಪಟ್ಟಿಗೆ ಸೇರಿಸಿಕೊಂಡಿರುವುದು ದುರಂತದ ಸಂಗತಿ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಅದು ಯಾವುದೇ ಸರಕಾರವಿರಲಿ, ಅದರ ಜನವಿರೋಧಿ ನಡೆಯನ್ನು ಟೀಕಿಸುವ, ತಿದ್ದುವ, ತೀಡುವ ಹಕ್ಕನ್ನು ಈ ದೇಶದ ಪ್ರಜಾತಂತ್ರ ವ್ಯವಸ್ಥೆ, ಸಂವಿಧಾನ ಕಲ್ಪಿಸಿದೆ. ಆದರೆ ಸರಕಾರಗಳು ತಮಗಿರುವ ಅಧಿಕಾರ ದುರ್ಬಳಕೆ ಮಾಡಿಕೊಂಡು, ಪೆÇಲೀಸ್ ಬಲದ ಮೂಲಕ ಸಾಹಿತಿಗಳು, ಬುದ್ಧಿಜೀವಿಗಳು, ಪ್ರಜಾÐವಂತರ ಧ್ವನಿ ಅಡಗಿಸಲು ಹೊರಟಿರುವುದು ಖಂಡನೀಯ ಎಮದವರು ತಿಳಿಸಿದ್ದಾರೆ.
ಸರಕಾರ ತನ್ನ ಈ ವಕ್ರನಡೆಯನ್ನು ತಿದ್ದಿಕೊಳ್ಳದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.