ಮೈಸೂರಲ್ಲಿ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ ಜಯಂತಿ ಆಚರಣೆ

ಮೈಸೂರು: ವೀರ ಸಾವರ್ಕರ್ ಯುವ ಬಳಗದ ವತಿಯಿಂದ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ 122ನೇ ಜಯಂತಿಯನ್ನು ನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿನ ಅವರ ಪ್ರತಿಮೆಗೆ ಗುರುವಾರ ಮಾಲಾರ್ಪಣೆ ಮಾಡುವ ಮೂಲಕ ಸ್ಮರಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಗರ ಪಾಲಿಕೆ ಸದಸ್ಯ ಸುಬ್ಬಯ್ಯರವರು, ಫೀಲ್ಡ್ ಮಾರ್ಷಲ್ ಕಾರಿಯಪ್ಪನವರು ಕರ್ನಾಟಕದ ಹೆಮ್ಮೆಯ ಸುಪುತ್ರ. ಮೊದಲನೇ ದಂಡನಾಯಕನ ಕೊಡುಗೆಯನ್ನು ಇಂದಿನ ಪೀಳಿಗೆ ಸಹ ನೆನೆಯುತ್ತಿರುವುದು ಸಂತೋಷದ ವಿಚಾರ ಎಂದು ತಿಳಿಸಿದರು.
ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ ಮಾತನಾಡಿ ಗಣರಾಜ್ಯೋತ್ಸವದಂದು ರಾಷ್ಟ್ರಪತಿಗಳಿಂದ ಕೆ.ಎಂ.ಕಾರಿಯಪ್ಪನವರ ಸ್ಮಾರಕ ನಿರ್ಮಾಣವಾಗಿದೆ. ಇದು ಅವರಿಗೆ ಸಂದ ದೊಡ್ಡ ಗೌರವವಾಗಿದೆ ಎಂದರು.
ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್ ಮಾತನಾಡಿ, ಕಾರಿಯಪ್ಪನವರ ಜಯಂತಿಯನ್ನು ಸರ್ಕಾರದ ವತಿಯಿಂದ ಪ್ರತಿ ವರ್ಷ ಆಚರಿಸುವಂತಾಗಬೇಕು, ಆಗ ಮತ್ತಷ್ಟು ಜನರು ಅವರನ್ನು ಸ್ಮರಿಸಿ ಗೌರವಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸದಸ್ಯರಾದ ರೇಣುಕಾರಾಜ್, ವೀರ ಸಾವರ್ಕರ್ ಯುವ ಬಳಗದ ಅಧ್ಯಕ್ಷ ರಾಕೇಶ್ ಭಟ್, ಸಂಚಾಲಕ ವಿಕ್ರಮ್ ಅಯ್ಯಂಗಾರ್, ಕುಮಾರ್ ಗೌಡ, ಬಿಜೆಪಿ ಮಾಧ್ಯಮ ಪ್ರಮುಖ್ ಪ್ರದೀಪ್ ಕುಮಾರ್, ಬಿಜೆಪಿ ವ್ಯಾಪಾರ ಪ್ರಕೋಷ್ಠ ಸಂಚಾಲಕ ಪರಮೇಶ್ ಗೌಡ, ಅಜಯ್ ಶಾಸ್ತ್ರಿ, ಎಸ್ ಎನ್ ರಾಜೇಶ್, ಗುರುರಾಜ್ ಶೆಟ್ಟಿ, ಆನಂದ್, ಲೋಹಿತ್, ರವಿ ಕುಂಚಿಟಿಗ, ಸುಚೇಂದ್ರ, ಚಕ್ರಪಾಣಿ, ವೆಂಕಟೇಶ್, ಹರೀಶ್ ನಾಯ್ಡು, ಮಧು ಎನ್. ಪೂಜಾರ್ ಇದ್ದರು.