ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾದ್ಯಾಂತ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೆÇೀಲಿಯೋ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ನಗರದ ಜಿಲ್ಲಾ ಅಸ್ಪತ್ರೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ಅಶ್ವಿನಿ ಅವರು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಧಿಕಾರಿ ಹರ್ಷಲ್ ಬೋಯರ್ ನಾರಯಣ ರಾವ್ ಅವರ ಮಗುವಿಗೆ ಪೆÇೀಲಿಯೋ ಹನಿ ಹಾಕುವ ಮೂಲಕ ಪಲ್ಸ್ ಪೆÇೀಲಿಯೋ ಕಾರ್ಯಕ್ರಮ ಉದ್ಘಾಟಿಸಿದರು.
ಇದೇ ವೇಳೆ ಅವರು ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಪಲ್ಸ್ ಪೆÇೀಲಿಯೋ ಅಭಿಯಾನ ಯಶಸ್ವಿಯಾಗಲಿ ಎಂದು ಹಾರೈಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶಶಿಕಲಾ ಅವರು ಮಾತನಾಡಿ ಯಾವುದೇ ವದಂತಿಗಳಿಗೆ ಕಿವಿಗೊಡದೆ ಪ್ರತಿಯೊಬ್ಬರು ಮಕ್ಕಳಿಗೆ ಪಲ್ಸ್ ಪೆÇೀಲಿಯೋ ಹನಿ ಹಾಕಿಸಬೇಕು. ಮಕ್ಕಳ ಆರೋಗ್ಯ ರಕ್ಷಣೆಗಾಗಿ ಹಮ್ಮಿಕೊಂಡಿರುವ ರಾಷ್ಟ್ರೀಯ ಪಲ್ಸ್ ಪೆÇೀಲಿಯೋ ಕಾರ್ಯಕ್ರಮ ಯಶಸ್ವಿಯಾಗಿ ನೇರೆವೆರಲು ಪ್ರತಿಯೊಬ್ಬರು ಸಹಕಾರ ನೀಡಬೇಕೆಂದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಧಿಕಾರಿ ಹರ್ಷಲ್ ಬೋಯರ್ ನಾರಯಣ ರಾವ್ ಮಾತನಾಡಿ ಪಲ್ಸ್ ಪೆÇೀಲಿಯೋ ಕಾರ್ಯಕ್ರಮ ಅತ್ಯಂತ ಮಹತ್ವದ್ದಾಗಿದೆ. ಅಂಗವೈಕಲ್ಯತೆ ತಪ್ಪಿಸುವ ಉದ್ದೇಶದಿಂದ ಅಭಿಯಾನ ನಡೆಸಿಕೊಂಡು ಬರಲಾಗುತ್ತಿದೆ. ವೈಜ್ಞಾನಿಕವಾಗಿ ಲಸಿಕೆಯನ್ನು ದಾಸ್ತಾನು ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಕಡೆ ಲಸಿಕೆ ನೀಡಲು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಲಾಗಿದೆ ಎಂದರು.
ನಗರಸಭೆ ಅಧ್ಯಕ್ಷರಾದ ಆಶಾನಟರಾಜು, ಉಪಾಧ್ಯಕ್ಷರಾದ ಸುಧಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಎಂ.ಸಿ.ರವಿ, ರೋಟರಿ ಸಂಸ್ಥೆಯ ಅಧ್ಯಕ್ಷ ಪ್ರಕಾಶ್, ಆರ್.ಸಿ.ಹೆಚ್.ಅಧಿಕಾರಿ ಡಾ. ವಿಶ್ವೇಶ್ವರಯ್ಯ, ಆರ್.ಎಂ.ಒ. ಡಾ. ಕೃಷ್ಣಪ್ರಸಾದ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.