ಇದೊಂದು ಐತಿಹಾಸಿಕ ಬಜೆಟ್; ಭವಿಷ್ಯದ ಭಾರತ ನಿರ್ಮಾಣಕ್ಕೆ ಬುನಾದಿ

ಮೈಸೂರು: ಇದೊಂದು ಐತಿಹಾಸಿಕ ಬಜೆಟ್; ಭವಿಷ್ಯದ ಭಾರತ ನಿರ್ಮಾಣಕ್ಕೆ ಬುನಾದಿ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಮಂಡಿಸಿದ ಬಜೆಟ್ ಕುರಿತು ಸಚಿವ ಸೋಮಶೇಖರ್ ಪ್ರತಿಕ್ರಿಯಿಸಿ, ಇದೊಂದು ಐತಿಹಾಸಿಕ ಬಜೆಟ್ ಎಂದರು.
ರೈತರಿಗೆ ಆರ್ಥಿಕ ಬಲ ತುಂಬಲು ಕನಿಷ್ಠ ಬೆಂಬಲ ಬೆಲೆ ನೀಡಲು ಬದ್ಧವಿದೆ ಎಂದು ಕೇಂದ್ರ ಘೋಷಣೆ ಮಾಡಿರುವುದು ಸ್ವಾಗತಾರ್ಹ. ನಮ್ಮ ಮೂಲಮಂತ್ರವಾದ ರೈತರ ಆದಾಯ ದ್ವಿಗುಣಗೊಳಿಸಲು ಎಲ್ಲ ರೀತಿಯ ಕ್ರಮಗಳನ್ನು ನಮ್ಮ ಸರ್ಕಾರಗಳು ತೆಗೆದುಕೊಳ್ಳುತ್ತುವೆ ಎಂಬುದನ್ನು ಈ ಬಜೆಟ್ ಮೂಲಕ ಎತ್ತಿ ತೋರಿಸಿದಂತಾಗಿದೆ ಎಂದವರು ತಿಳಿಸಿದ್ದಾರೆ.
ಎಪಿಎಂಸಿಗಳ ಉನ್ನತೀಕರಣಕ್ಕಾಗಿ ಹಾಗೂ ಮೂಲಸೌಕರ್ಯ ವೃದ್ಧಿಸುವ ಬಗ್ಗೆಯೂ ಕೇಂದ್ರ ಸರ್ಕಾರ ಘೋಷಣೆ ಮಾಡುವ ಮೂಲಕ ರೈತರ ಪರ ನಮ್ಮ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ.
ಬೆಂಗಳೂರು ಅಭಿವೃದ್ಧಿಗೂ ಕೇಂದ್ರ ಸರ್ಕಾರ ಬೆಂಗಳೂರು ಮೆಟ್ರೋಗಾಗಿ 14788 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ಉತ್ಪಾದನಾ ಕ್ಷೇತ್ರಕ್ಕೂ ಸಹ ಆತ್ಮನಿರ್ಭರ ಭಾರತ ಅಡಿ ಅನುದಾನಗಳನ್ನು ಮೀಸಲಿಟ್ಟಿದೆ. ಕೇಂದ್ರ ಸರ್ಕಾರ ನಾಗರಿಕರ ಅನುಕೂಲಕ್ಕೆ ಈ ಸಾಲಿನ ಆಯವ್ಯಯದಲ್ಲಿ ಮೀಸಲಿಟ್ಟಿದೆ. ಇದು ದೂರದೃಷ್ಟಿಯುಳ್ಳ ಬಜೆಟ್ ಎಂದವರು ತಿಳಿಸಿದ್ದಾರೆ.