ಫೆ.6 ರಂದು ರಾಷ್ಟ್ರೀಯ, ರಾಜ್ಯ ಹೆದ್ದಾರಿ ಬಂದ್ -ಬಡಗಲಪುರ ನಾಗೇಂದ್ರ

ಮೈಸೂರು: ರಾಷ್ಟ್ರೀಯ, ರಾಜ್ಯ ಹೆದ್ದಾರಿ ಬಂದ್ ಮಾಡಿ ಫೆ. 6ರಂದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ತಿಳಿಸಿದರು.
ನಗರದಲ್ಲಿ ಬುಧವಾರ ಬಡಗಲಪುರ ನಾಗೇಂದ್ರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಕೇಂದ್ರದ ಕೃಷಿಕಾಯ್ದೆ ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದು, ಫೆ. 6ರಂದು ರಾಷ್ಟ್ರೀಯ, ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಫೆ. 6ರಂದು ಮೂರು ಗಂಟೆಗಳ ಕಾಲ ರಸ್ತೆ ತಡೆದು ಹೋರಾಟ ಮಾಡುತ್ತೇವೆ. ಮಧ್ಯಾಹ್ನ 12ರಿಂದ 3ರ ವರೆಗೆ ಈ ಹೋರಾಟ ನಡೆಸುತ್ತೇವೆ ಎಂದು ಅವರು ತಿಳಿಸಿದರು.
ನಮಗೆ ಈ ಹೋರಾಟಕ್ಕೆ ಯಾವುದೇ ಅನುಮತಿ ಇಲ್ಲ. ಆದರು ನಾವು ನಮ್ಮ ಹೋರಾಟ ಮಾಡುತ್ತೇವೆ. ಅವರಿಗೆ ಮಾಹಿತಿ ನೀಡಿ ನಮ್ಮ ಹೋರಾಟ ಮಾಡುತ್ತೇವೆ ಎಂದು ನಾಗೇಂದ್ರ ತಿಳಿಸಿದರು.
ನಮ್ಮನ್ನ ಪೊಲೀಸರು ಬಂಧಿಸಿದರೂ ಸರಿ. ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದರು.