ಫೆ. 7ರಂದು ಕರ್ನಾಟಕ ಜಾನಪದ ಅಕಾಡೆಮಿ ರಾಜ್ಯ ಮಟ್ಟದ ವಾರ್ಷಿಕ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ

ಚಾಮರಾಜನಗರ: ಕರ್ನಾಟಕ ಜಾನಪದ ಅಕಾಡೆಮಿ ಹಾಗೂ ಜಿಲ್ಲಾಡಳಿತ ವತಿಯಿಂದ ಇದೇ ಮೊಟ್ಟ ಮೊದಲ ಬಾರಿಗೆ ಚಾಮರಾಜನಗರದಲ್ಲಿ 2020ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿಯ ರಾಜ್ಯ ಮಟ್ಟದ ವಾರ್ಷಿಕ ಗೌರವ ಪ್ರಶಸ್ತಿ ಪ್ರದಾನ ಹಾಗೂ 2018-19ನೇ ಸಾಲಿನ ಪುಸ್ತಕ ಬಹುಮಾನ ವಿತರಣಾ ಸಮಾರಂಭವನ್ನು ಫೆ. 7 ರಂದು ಹಮ್ಮಿಕೊಳ್ಳಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ ಮಂಜಮ್ಮ ಜೋಗತಿ ಹಾಗೂ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಸುದ್ದಿಗೋಷ್ಠಿ ನಡೆಸಿ ಅಕಾಡೆಮಿಯ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಹುಮಾನ ವಿತರಣಾ ಕಾರ್ಯಕ್ರಮ ಕುರಿತು ವಿವರಿಸಿದರು.
ಫೆ. 7ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಮಾರಂಭ ನಡೆಯಲಿದೆ. ಇದಕ್ಕೂ ಮೊದಲು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಿಂದ ಪ್ರಶಸ್ತಿ ಪುರಸ್ಕøತರನ್ನು ಅಲಂಕೃತ ಎತ್ತಿನಗಾಡಿಗಳ ಮೂಲಕ ಕಲಾ ತಂಡಗಳ ಪ್ರದರ್ಶನದೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಕಾರ್ಯಕ್ರಮ ನಡೆಯುವ ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಗೌರವ ಪೂರ್ವಕವಾಗಿ ಕರೆದೊಯ್ಯಲಾಗುತ್ತದೆ.
ಪಚ್ಚಪ್ಪ ವೃತ್ತ, ಸುಲ್ತಾನ್ ಶರೀಫ್ ವೃತ್ತ ಮಾರ್ಗವಾಗಿ ಸಾಗುವ ಮೆರವಣಿಗೆಯಲ್ಲಿ ಕಂಸಾಳೆ, ಗೊರವರ ಕುಣಿತ, ನಗಾರಿ, ತಮಟೆ, ಮರಗಾಲು ಕುಣಿತ, ಕಂಡಾಯ ಸೇರಿದಂತೆ ಜಿಲ್ಲೆಯ ದೇಸಿ ಸಂಸ್ಕøತಿಯ ವೈಭವ ಬಿಂಬಿತವಾಗಲಿದೆ ಎಂದರು.
ಪೂರ್ಣಕುಂಭಗಳೊಂದಿಗೆ ಪ್ರಶಸ್ತಿ ಪುರಸ್ಕøತರನ್ನು ಸ್ವಾಗತಿಸಲಾಗುತ್ತದೆ. ಬೆಳಿಗ್ಗೆ 11 ಗಂಟೆಗೆ ನಗರದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಅವರು ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಪ್ರಶಸ್ತಿ ಪ್ರದಾನ ಮಾಡುವರು.
ಪ್ರಶಸ್ತಿ ಪುರಸ್ಕøತರ ಪರಿಚಯ ಮಾಡಿಕೊಡುವ ಜಾನಪದ ರತ್ನ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ. ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದು, ದೇಸಿ ಸಂಸ್ಕøತಿ ಚಿಂತಕರು ಪ್ರಖ್ಯಾತ ಸಂಗೀತ ನಿರ್ದೇಶಕರು ನಾದಬ್ರಹ್ಮ ಡಾ. ಹಂಸಲೇಖ ಅವರು ಅಭಿನಂದನಾ ನುಡಿಗಳನ್ನಾಡುವರು. ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ. ಬಿ ಮಂಜಮ್ಮ ಜೋಗತಿ ಅವರು ಪ್ರಾಸ್ತವಿಕ ನುಡಿಗಳನ್ನಾಡವರು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಹಾಗೂ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ ಮಂಜಮ್ಮ ಜೋಗತಿ ತಿಳಿಸಿದರು.
ರಾಜ್ಯದ 30 ಜಿಲ್ಲೆಗಳಿಂದ ಆಯ್ಕೆಯಾಗಿರುವ ಪ್ರಶಸ್ತಿ ಪುರಸ್ಕøತರು, ಇಬ್ಬರು ತಜ್ಞ ಪ್ರಶಸ್ತಿ ಪುರಸ್ಕøತರು, ಇಬ್ಬರು ಪುಸ್ತಕ ಬಹುಮಾನಿತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರಶಸ್ತಿ ಪುರಸ್ಕøತರಿಗೆ 25 ಸಾವಿರ ರೂ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ನೀಡಿ ಸನ್ಮಾನಿಸಲಾಗುತ್ತದೆ ಎಂದು ಮಾತಾ ಬಿ ಮಂಜಮ್ಮ ಜೋಗತಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಮಾತನಾಡಿ ಜಿಲ್ಲೆಯ ನೆನಪಿಗೋಸ್ಕರ ಸ್ಥಳೀಯ ಆದಿವಾಸಿಗಳು ಸಿದ್ದಪಡಿಸಿದ ಜೇನುತುಪ್ಪ, ಅಡವಿ ಬ್ರಾಂಡಿನ ಕಾಫಿಪುಡಿ ಮತ್ತು ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ ಚಾಮುಲ್ ವತಿಯಿಂದ ಪೇಡ ಹಾಗೂ ಮಲೆ ಮಹದೇಶ್ವರ ಕ್ಷೇತ್ರದ ಪ್ರಸಾದವನ್ನು ಪ್ರಶಸ್ತಿ ಪುರಸ್ಕøತರಿಗೆ ನೀಡಲಾಗುತ್ತದೆ ಎಂದರು.
ರಾಜ್ಯ ಮಟ್ಟದ ಸಮಾರಂಭ ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಿ ಹೊಣೆಗಾರಿಕೆ ನೀಡಲಾಗಿದೆ. ಪ್ರಶಸ್ತಿ ಪುರಸ್ಕøತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಹಿಂದಿನ ದಿನವೇ ಅಂದರೆ ಫೆ. 6ರಂದೇ ಆಗಮಿಸಲಿರುವ ಹಿನ್ನೆಲೆಯಲ್ಲಿ ಅವರ ವಾಸ್ತವ್ಯಕ್ಕೆ ನಗರದ ಪ್ರತಿಷ್ಠಿತ ಖಾಸಗಿ ವಸತಿ ಗೃಹಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಅಚ್ಚುಕಟ್ಟಾಗಿ ಊಟ ಉಪಹಾರ ವ್ಯವಸ್ಥೆ ಮಾಡಲಾಗಿದ್ದು ಸ್ಥಳೀಯ ವೈಶಿಷ್ಟ್ಯ ಭೋಜನದಲ್ಲಿ ಹೋಳಿಗೆ, ಉತ್ತರ ಕರ್ನಾಟಕದ ಜೋಳದ ರೊಟ್ಟಿ ಎಣ್ಣೆಗಾಯಿ, ಇತರೆ ಖಾದ್ಯಗಳು ಇರಲಿವೆ ಎಂದರು.
ಜಾನಪದ ಅಕಾಡೆಮಿಯ ಸದಸ್ಯರಾದ ಸಿ.ಎಂ. ನರಸಿಂಹಮೂರ್ತಿ, ಎಸ್.ಜಿ ಲಕ್ಷ್ಮಿ ದೇವಮ್ಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಕೆ. ಗಿರೀಶ್ ಇತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.