ಮೈಸೂರು: ವರ್ಷದಲ್ಲಿ 365 ದಿನಗಳಲ್ಲೂ ಮೈಸೂರು ಸ್ವಚ್ಛವಾಗಿರಬೇಕು ಎಂಬ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದೇವೆ. ಈ ನಿಟ್ಟಿನಲ್ಲಿ ವಿಭಾಗವಾರು ತಂಡ ಮಾಡಿ ಜವಾಬ್ದಾರಿ ಕೊಡಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಮೈಸೂರು ಹೊರವರ್ತುಲ ರಸ್ತೆಯ ಸ್ವಚ್ಛತೆಯನ್ನು ಸಚಿವರು ಭಾನುವಾರ ಪರಿಶೀಲಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮುಡಾ, ಕಾಪೆರ್Çೀರೇಶನ್, ಲೋಕೋಪಯೋಗಿ, ಜಲಮಂಡಳಿ, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಪ್ರಾಧಿಕಾರ ಸೇರಿದಂತೆ ಇನ್ನಿತರ ಇಲಾಖೆಗಳಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರು ಸಹ ಕಸ ಹಾಕಬಾರದು. ಇನ್ನು ರಸ್ತೆ ಹಾಗೂ ರಸ್ತೆ ಪಕ್ಕ ಎಲ್ಲೆಂದರಲ್ಲಿ ಕಸ ಹಾಕುವುದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರು ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ಹೇಳಲಾಗಿದೆ ಎಂದರು.
ಅಕ್ರಮವಾಗಿ ಕಸ ಸುರಿದರೆ ಲಾರಿ ಮಾಲೀಕರಿಗೆ ದಂಡ ಹಾಕಿ ಜೈಲಿಗೆ ಕಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಪೆÇಲೀಸ್ ಆಯುಕ್ತರಿಗೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಕಸ ವಿಲೇವಾರಿಗೆ ಜಾಗ ನೋಡಲು ಕಾಪೆರ್Çೀರೇಶನ್ ಆಯುಕ್ತರಿಗರಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಕೆಲವು ಜಾಗಗಳನ್ನು ನಾವು ಗುರುತಿಸಿದ್ದೇವೆ. ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.
ಮೈಸೂರಿನಲ್ಲಿ ಹಸಿರೀಕರಣಕ್ಕೆ ಒತ್ತು ಕೊಡಬೇಕು. ರಸ್ತೆ ಪಕ್ಕದಲ್ಲಿ ಒಣಗಿರುವ ಹಾಗೂ ಗಿಡವಿಲ್ಲದ ಜಾಗಗಳಲ್ಲಿ ಸಸಿಗಳನ್ನು ನೆಡುವ ಮೂಲಕ ಹಸಿರೀಕರಣ ಮಾಡಬೇಕು. ತಕ್ಷಣವೇ ರಿಂಗ್ ರಸ್ತೆಯ ಪೂರಾ 42 ಕಿ.ಮೀ. ವ್ತಾಪ್ತಿಯಲ್ಲಿಯೂ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ, ಮುಡಾ ಹಾಗೂ ಕಾಪೆರ್Çರೇಷನ್ ಗೆ ಅಧಿಕಾರಿಗಳಿಗೆ ಸಚಿವರಾದ ಎಸ್.ಟಿ.ಸೋಮಶೇಖರ್ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರುಗಳಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಪೆÇಲೀಸ್ ಆಯುಕ್ತ ಚಂದ್ರಗುಪ್ತ, ಡಿಸಿಪಿ ಪ್ರಕಾಶ್ ಗೌಡ, ಕಾಪೆರ್Çೀರೇಶನ್ ಆಯುಕ್ತ ಗುರುದತ್ತ ಹೆಗಡೆ, ಮುಡಾ ಆಯುಕ್ತ ನಟೇಶ್ ಸೇರಿದಂತೆ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.