ಮೈಸೂರು: ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರು-ಎಚ್.ಡಿ.ಕೋಟೆಯ ರಸ್ತೆಯಲ್ಲಿರುವ ಉದ್ಬೂರು ಗೇಟ್ ಬಳಿ ಈ ಘಟನೆ ನಡೆದಿದೆ.
ಈ ಅಪಘಾತದಲ್ಲಿ ಮೃತಪಟ್ಟವರನ್ನು ಎಚ್.ಡಿ.ಕೋಟೆ ತಾಲ್ಲೂಕಿನ ಅಲತ್ತೂರು ಗ್ರಾಮದ ಶಿವ (34), ಬೋಗಾದಿ ವಾಸಿ ನಂದನ್ (24) ಎಂದು ಗುರುತಿಸಲಾಗಿದೆ.
ಭಾನುವಾರ ಇವರಿಬ್ಬರು ಎಚ್.ಡಿ.ಕೋಟೆಗೆ ತೆರಳಿದ್ದರು. ಕೆಲಸ ಮುಗಿಸಿಕೊಂಡು ಮೈಸೂರಿಗೆ ವಾಪಸ್ ಬರುತ್ತಿದ್ದಾಗ ಜಯಪುರ ಹೋಬಳಿಯ ಉದ್ಬೂರು ಗೇಟ್ ಬಳಿ ತಡರಾತ್ರಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಜಯಪುರ ಠಾಣೆ ಪೆÇಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.