ಮೈಸೂರು ಪೇಯಿಂಟ್ಸ್ ಮತ್ತು ವಾರ್ನಿಷ್ ಸಂಸ್ಥೆಯಿಂದ ವೆಂಡರ್ಸ್ ಮೀಟ್

ಮೈಸೂರು: ರಾಷ್ಟ್ರದ ಪ್ರತಿಷ್ಠಿತ ಸಂಸ್ಥೆಯಾದ ಮೈಸೂರು ಪೇಯಿಂಟ್ಸ್ ಮತ್ತು ವಾರ್ನಿಷ್ ಸಂಸ್ಥೆ ತನ್ನ ವ್ಯಾಪಾರ ವಹಿವಾಟನ್ನು ವಿಸ್ತರಿಸುವ ನಿಟ್ಟಿನಲ್ಲಿ ಪ್ರಥಮ ಬಾರಿಗೆ ವೆಂಡರ್ಸ್ ಮೀಟ್ ಅನ್ನು ಆಯೋಜಿಸಿತ್ತು.
ಸಂಸ್ಥೆಯ ಆವರಣದಲ್ಲಿ ಅಧ್ಯಕ್ಷ ಎನ್.ವಿ. ಫಣೀಶ್ ರವರ ಅಧ್ಯಕ್ಷತೆಯಲ್ಲಿ ನಡೆದ ವೆಂಡರ್ಸ್ ಮೀಟ್ ನಲ್ಲಿ 25ಕ್ಕೂ ಹೆಚ್ಚು ಮಂದಿ ವಹಿವಾಟುದಾರರು ಭಾಗವಹಿಸಿದ್ದರು.
ಮುಂದಿನ ವಿಸ್ತಾರ ಯೋಜನೆಗೆ ಸಂಬಂಧಿಸಿದಂತೆ ಅತ್ಯಂತ ಉಪಯುಕ್ತ ಚರ್ಚೆ ಸಭೆಯಲ್ಲಿ ನಡೆಯಿತು.
ವ್ಯವಸ್ಥಾಪಕ ನಿರ್ದೇಶಕ ಡಾ. ಚಂದ್ರಶೇಖರ ದೊಡ್ಡಮನಿ, ಪ್ರಧಾನ ವ್ಯವಸ್ಥಾಪಕ ಹರಕುಮಾರ್, ಮತ್ತು ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.