ಮೈಸೂರು: ನಗರದಲ್ಲಿನ ಎಲೆ ತೋಟ ಬಳಿ ಜೋಡಿ ಕೊಲೆ ನಡೆದಿದೆ.
ನಗರದ ಗೌರಿಶಂಕರ ನಗರ ವಾಸಿಗಳಾದ ಕಿರಣ್ (29) ಹಾಗೂ ಕಿಶನ್ (29) ಕೊಲೆಯಾದವರು.
ತಡರಾತ್ರಿ ಮಾರಕಾಸ್ತ್ರಗಳಿಂದ ಇವರಿಬ್ಬರನ್ನು ಕೊಚ್ಚಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ.
ಈ ದುರ್ಘಟನೆಯಲ್ಲಿ ಮಧು ಎಂಬಾತನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಆಸ್ಪತ್ರಗೆ ದಾಖಲಿಸಲಾಗಿದೆ.
ಈ ಕೊಲೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಜಾಗದ ವಿಚಾರದಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಕೆ ಆರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.