ಫ್ರಂಟ್ ಲೈನ್ ವಾರಿಯರ್ಸ್‍ಗಳಿಗೆ ಕೊರೊನಾ ಲಸಿಕೆ: ಲಸಿಕೆ ಪಡೆದ ಡಿಸಿ ರವಿ

ಚಾಮರಾಜನಗರ: ಜಿಲ್ಲೆಯಲ್ಲಿ ಆರೋಗ್ಯ ಕಾರ್ಯಕರ್ತರ ಬಳಿಕ ಫ್ರಂಟ್ ಲೈನ್ ವಾರಿಯರ್ಸ್‍ಗಳಿಗೆ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ.
ಜಿಲ್ಲೆಯಲ್ಲಿ ಕಂದಾಯ, ಪೆÇಲೀಸ್ ಹೋಂ ಗಾಡ್ರ್ಸ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ದಿ ಇಲಾಖೆ (ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ) ಅಧಿಕಾರಿ ಸಿಬ್ಬಂದಿಯನ್ನು ಫ್ರಂಟ್ ಲೈನ್ ವಾರಿಯರ್ ಗಳೆಂದು ಗುರುತಿಸಲಾಗಿದ್ದು ಈಗಾಗಲೇ 3802 ಮಂದಿ ಫಲಾನುಭವಿಗಳು ಕೋವಿನ್ ಪೆÇೀರ್ಟಲ್ ನಲ್ಲಿ ಹೆಸರು ನೊಂದಾಯಿಸಿದ್ದಾರೆ.
ಕಂದಾಯ ಇಲಾಖೆಯಲ್ಲಿ 581, ಗ್ರಾಮೀಣಾಭಿವೃದ್ದಿ ಮತ್ತರು ಪಂಚಾಯತ್ ರಾಜ್ ಇಲಾಖೆಯಲ್ಲಿ 1649, ಪೆÇಲೀಸ್ ಹೋಂಗಾಡ್ರ್ಸ್ ಇಲಾಖೆಯಲ್ಲಿ 1461, ನಗರಾಭಿವೃದ್ದಿ ಇಲಾಖೆಯಲ್ಲಿ 111 ಅಧಿಕಾರಿ ಸಿಬ್ಬಂದಿ ಲಸಿಕೆಗಾಗಿ ಹೆಸರು ನೊಂದಾಯಿಸಿದ್ದಾರೆ.
ಫ್ರಂಟ್ ಲೈನ್ ವಾರಿಯರ್ಸ್‍ಗಳೆಂದು ಗುರುತಿಸಲಾಗಿರುವವರಿಗೆ ಲಸಿಕೆ ನೀಡುವ ಕಾರ್ಯ ಜಿಲ್ಲಾದ್ಯಂತ ಪ್ರಾರಂಭವಾಯಿತು. ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಇಂದು ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆ ಪಡೆದುಕೊಂಡರು. ಇದೇ ವೇಳೆ ಫ್ರಂಟ್ ಲೈನ್ ವಾರಿಯರ್ಸ್‍ಗಳಿಗೆ ಇಂದಿನಿಂದ ನೀಡಲಾಗುತ್ತಿರುವ ಲಸಿಕಾ ಕಾರ್ಯವನ್ನು ಜಿಲ್ಲಾಧಿಕಾರಿಯವರು ಪರಿಶೀಲಿಸಿದರು.
ಇಂದು ಒಟ್ಟು 177 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ನಗರದ ಜಿಲ್ಲಾ ಆಸ್ಪತ್ರೆ, ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು ಪಟ್ಟಣದ ಸರ್ಕಾರಿ ಆಸ್ಪತ್ರೆ, ಬೇಗೂರು, ಸಂತೇಮರಹಳ್ಳಿ ಸಮುದಾಯ ಆರೋಗ್ಯ ಕೇಂದ್ರ, ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡುವ ವ್ಯವಸ್ಥೆ ಕೈಗೊಳ್ಳಲಾಗಿದೆ.