ಮೈಸೂರಲ್ಲಿ ಜೋಡಿ ಕೊಲೆ: ಇಬ್ಬರು ಆರೋಪಿಗಳ ಬಂಧನ

ಮೈಸೂರು: ಮೈಸೂರಿನಲ್ಲಿ ಭಾನುವಾರ ತಡರಾತ್ರಿ ನಡೆದಿದ್ದ ಜೋಡಿ ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳು ಪೆÇಲೀಸರಿಗೆ ಶರಣಾಗಿದ್ದಾರೆ.
ಮೀಸೆಸ್ವಾಮಿ, ರಘು ಪೊಲೀಸರಿಗೆ ಶರಣಾಗಿರುವ ಆರೋಪಿಗಳು.
ಈ ಘಟನೆ ಸಂಬಂಧ ಮತ್ತಿಬ್ಬರು ಆರೋಪಿಗಳಾದ ದಿಲೀಪ್ ಹಾಗೂ ರಘು ಬಂಧನಕ್ಕೆ ಪೆÇಲೀಸರು ಬಲೆ ಬೀಸಿದ್ದಾರೆ.
ನಗರದ ಎಲೆ ತೋಟದ ಬಳಿ ಕಿರಣ್ ಮತ್ತು ಕಿಶನ್ ಎಂಬುವವರನ್ನ ಭಾನುವಾರ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಲೆ ಮಾಡಲಾಗಿತ್ತು.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಆರೋಪಿಗಳು ಪೊಲೀಸರ ತನಿಖೆ ವೇಳೆ ತಿಳಿಸಿದ್ದಾರೆ.