ಕುರಿಮಂಡಿ ವ್ಯಕ್ತಿ ಕೊಲೆ ಪ್ರಕರಣ: ಪ್ರಮುಖ ಆರೋಪಿ ಬಂಧನ

ಮೈಸೂರು: ವ್ಯಕ್ತಿಯೊಬ್ಬನ ಕೊಲೆ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಪ್ರಮುಖ ಆರೋಪಿ ವಿನಯ್.
ಮೈಸೂರಿನ ಕುರಿಮಂಡಿಯಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೆÇಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ವಿನಯ್ ಎಂದು ಗುರುತಿಸಲಾಗಿದೆ. ಈತ ಪ್ರಮುಖ ಆರೋಪಿಯಾಗಿದ್ದಾನೆ.
ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ ವಿನಯ್ ನನ್ನು ಪೆÇಲೀಸರು ಬುಧವಾರ ಬಂಧಿಸಿದ್ದಾರೆ.
ಈತ ಇತರೆ ಆರೋಪಿಗಳೊಂದಿಗೆ ಸೇರಿ ಡಿ. 14ರಂದು ರವಿ ಎಂಬಾತನನ್ನು ಅವರ ನಿವಾಸದಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಇತರೆ ಆರೋಪಿಗಳಾದ ನಿಖಿಲ್ ಮತ್ತು ಅಪ್ಪು ಅವರನ್ನು ಈಗಾಗಲೇ ಬಂಧಿಸಲಾಗಿದೆ.