ಹಿರೇಕೆರೂರು: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಬಸರೀಹಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಹೆಲಿಪ್ಯಾಡ್ ಅನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಉದ್ಘಾಟಿಸಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್ ಅವರು, ಬಿಪಿಎಲ್ ಕಾರ್ಡ್ ಹೊಂದಲು ಕೆಲವೊಂದು ನಿಯಮಗಳಿವೆ. ಅದನ್ನು ಉಲ್ಲಂಘಿಸಿದರೆ ಮಾತ್ರ ರದ್ದುಪಡಿಸಿರುವುದಾಗಿ ಸಚಿವರಾದ ಉಮೇಶ್ ಕತ್ತಿಯವರು ಹೇಳಿರಬಹುದು. ಆ ಬಗ್ಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ. ಒಂದು ಬೈಕ್ ಅಥವಾ ಟಿವಿ ಇದ್ದರೆ ರದ್ದು ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಇದ್ದಂತೆ ಕಾಣುತ್ತಿಲ್ಲ. ಕೆಲವೊಂದು ಮನೆಗಳಲ್ಲಿ 3-4 ಬೈಕ್ ಗಳನ್ನು ಇಟ್ಟುಕೊಂಡಿರುವ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ನಿಯಮಗಳಿಗನುಸಾರವಾಗಿ ರದ್ದು ಮಾಡುವ ಬಗ್ಗೆ ಸಚಿವರು ಪ್ರಸ್ತಾಪ ಮಾಡಿರಬಹುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.