ಮೈಸೂರು: ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳ ‘ನಡೆ ಹಳ್ಳಿ ಕಡೆ’ ಎಂಬ ನೂತನ ಕಾರ್ಯಕ್ರಮವನ್ನ ಸರ್ಕಾರ ಜಾರಿಗೆ ತಂದಿದ್ದು ಈ ಹಿನ್ನೆಲೆಯಲ್ಲಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಅವರು ಜಿಲ್ಲೆಯ ತೆರಿಕಲ್ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.
ಫೆ. 20ರಂದು ಡಿಸಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಜಾರಿಗೆ ಬರಲಿದ್ದು ಈ ಹಿನ್ನೆಲೆಯಲ್ಲಿ ಅಂದು ಹೂಣಸೂರು ತಾಲೂಕು ಬಿಳಿಕೆರೆ ಹೋಬಳಿಯ ತೆರಿಕಲ್ ಗ್ರಾಮದಲ್ಲಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಅವರು ಗ್ರಾಮವಾಸ್ತವ್ಯ ಹೂಡಲಿದ್ದಾರೆ.
ಗ್ರಾಮ ವಾಸ್ತವ್ಯದಲ್ಲಿ ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಕಂದಾಯ ಇಲಾಖೆಯನ್ನು ಜನರ ಬಳಿಗೆ ಕೊಂಡೊಯ್ಯುವ ಉದ್ದೇಶದಿಂದ ಈ ಕಾರ್ಯಕ್ರಮವನ್ನ ಜಾರಿಗೆ ತರಲಾಗಿದ್ದು ಜಿಲ್ಲಾಧಿಕಾರಿಗಳು ಗ್ರಾಮದಲ್ಲೇ ವಾಸ್ತವ್ಯ ಹೂಡಿ ಜನರ ಸಮಸ್ಯೆಯನ್ನ ಖುದ್ದು ಆಲಿಸಲಿದ್ದಾರೆ.
ಇನ್ನು ತೆರಕಲ್ ಗ್ರಾಮದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಡಿಸಿ ರೋಹಿಣಿ ಸಿಂಧೂರಿ ಅವರು ವಾಸ್ತವ್ಯ ಹೂಡಲಿದ್ದಾರೆ.