ಗೋ ಹತ್ಯೆ ನಿಷೇಧ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸಚಿವ ಪ್ರಭು ಚವ್ಹಾಣ್ ಸೂಚನೆ

ಚಾಮರಾಜನಗರ: ಭಾರತೀಯ ಸಂಸ್ಕøತಿಯಲ್ಲಿ ಗೋವುಗಳಿಗೆ ಪೂಜ್ಯ ಸ್ಥಾನವಿದ್ದು ಅವುಗಳ ರಕ್ಷಣೆ ಮತ್ತು ಸಂರಕ್ಷಣೆ ಮುಖ್ಯ ಜವಾಬ್ದಾರಿಯಾಗಿದ್ದು ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕೆಂದು ಪಶುಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ್ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಗೋ ಹತ್ಯೆ ನಿಷೇಧ ಕಾಯ್ದೆ ಅನುಷ್ಠಾನ ಹಾಗೂ ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.
ಗೋಹತ್ಯೆ ಮಾಡಿದರೆ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ ಗರಿಷ್ಠ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. 50 ಸಾವಿರದಿಂದ 5 ಲಕ್ಷದವರೆಗೆ ದಂಡ ಎರಡು ಅಥವಾ ಹೆಚ್ಚಿನ ಅಪರಾಧಕ್ಕೆ 1 ಲಕ್ಷದಿಂದ 10 ಲಕ್ಷ ದಂಡ ಮತ್ತು 7 ವರ್ಷ ಕಾರಾಗೃಹ ವಾಸ ವಿಧಿಸಲು ಅವಕಾಶವಿದೆ ಎಂದರು.
ಗೋಹತ್ಯೆ ನಿಷೇಧ ಕಾಯ್ದೆಯ ಅರಿವು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಗೆ ಸಂಪೂರ್ಣವಾಗಿ ಇರಬೇಕು. ಕಾಯ್ದೆಯ ಬಗ್ಗೆ ಪೂರ್ಣ ಪ್ರಮಾಣದಲ್ಲಿ ಮನನ ಮಾಡಿಕೊಂಡು ಗೋವುಗಳ ಸಂರಕ್ಷಣೆ ಮಾಡಬೇಕು ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ ಅಂತರ್ ರಾಜ್ಯ ಗಡಿ ಭಾಗಗಳು ಸಂಪರ್ಕದಲ್ಲಿರುವುದರಿಂದ ಗೋವುಗಳು ಸಾಗಾಣಿಕೆ ಮೇಲೆ ನಿಗಾ ಇಡಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಇದೇ ವೇಳೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಮಾತನಾಡಿ ಗೋವು ಸಾಗಣೆ ತಡೆಯುವ ನಿಟ್ಟಿನಲ್ಲಿ ಅತ್ಯಂತ ಬಿಗಿ ಕ್ರಮಗಳನ್ನು ವಹಿಸಲಾಗಿದೆ ಎಂದರು.
ಗೋಮಾಳ ಜಮೀನನ್ನು ಗುರುತಿಸಿ ಇಲಾಖೆಗೆ ಕೊಟ್ಟರೆ ಅಲ್ಲಿ ಮೇವು ಬೆಳೆಯಲು ಸಹಾಯವಾಗುತ್ತದೆ. ಸಾಧ್ಯವಾದಷ್ಟು ಬೇಗ ಗೋಮಾಳ ಒತ್ತುವರಿ ಆಗಿದ್ದರೆ ತೆರವುಗೊಳಿಸಿ ಎಂದು ಸಚಿವರು ಜಿಲ್ಲಾಧಿಕಾರಿಯವರಿಗೆ ತಿಳಿಸಿದರು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯನ್ನು ಸ್ಥಾಪನೆ ಮಾಡಲಾಗಿದೆ ಸಚಿವರು ತಿಳಿಸಿದರು.
ರಾಜ್ಯದಲ್ಲಿ 85.22 ಲಕ್ಷ ದನ, 29.98 ಲಕ್ಷ ಎಮ್ಮೆ, 110.91 ಲಕ್ಷ ಕುರಿ, 61.96 ಲಕ್ಷ ಮೇಕೆ, 3.26 ಲಕ್ಷ ಹಂದಿ ಮತ್ತು 617 ಲಕ್ಷ ಕೋಳಿಗಳಿವೆ. ಈ ಎಲ್ಲಾ ಜಾನುವಾರುಗಳ ಆರೋಗ್ಯರಕ್ಷಣೆಗಾಗಿ 4214 ಪಶುವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಎಂದರು.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚೀಲನಹಳ್ಳಿಯಲ್ಲಿ ನಬಾರ್ಡ್ ಮೂಲಕ 44.63 ಕೋಟಿ ವೆಚ್ಚದಲ್ಲಿ ವಧಾಗಾರ, ಕುರಿ ಮತ್ತು ಮೇಕೆ ಮಾಂಸ ಸಂಸ್ಕರಣಾ ಘಟಕ ನಿರ್ಮಾಣ ಮಾಡಲಾಗುತ್ತಿದೆ ಎಂದರು.
ಗೋ ಹತ್ಯೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಜಿಲ್ಲೆಗಳಲ್ಲಿ ವಿಶೇಷ ನ್ಯಾಯಾಲಯಗಳ ಸ್ಥಾಪನೆ ಮಾಡಲಾಗುತ್ತಿದೆ. ಗೋ ಶಾಲೆಗಳ ನಿರ್ವಹಣೆಗೆ ಅನುದಾನ ಒದಗಿಸಲಾಗುತ್ತಿದೆ ಎಂದು ಸಚಿವರಾದ ಪ್ರಭು ಬಿ. ಚವ್ಹಾಣ್ ತಿಳಿಸಿದರು.
ಜಿಲ್ಲಾ ಪಂಚಾಯಿತಿಯ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಪಿ. ಸದಾಶಿವ ಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ.ಬಿ. ಶಾಂತಮೂರ್ತಿ ಕುಲಗಾಣ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಾದ ದಿವ್ಯಾ ಸಾರಾ ಥಾಮಸ್, ಹೆಚ್ಚುವರಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಾದ ಅನಿತಾ. ಬಿ ಹದ್ದಣ್ಣನವರ್, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ವೀರಭದ್ರಯ್ಯ ಇನ್ನಿತರರು ಸಭೆಯಲ್ಲಿ ಹಾಜರಿದ್ದರು.