ರಾಮ ಮಂದಿರ ದೇಣಿಗೆ: ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಉತ್ತರಿಸಿದರು ತನ್ವೀರ್ ಸೇಠ್

ಮೈಸೂರು: ದಾನ ಧರ್ಮ ಕೊಡುವುದು ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗಬಾರದು ಎಂದು ಮಾರ್ಮಿಕವಾಗಿ ಶಾಸಕ ತನ್ವೀರ್ ಸೇಠ್ ಹೇಳಿದರು.
ನಗರದಲ್ಲಿ ಶುಕ್ರವಾರ ತನ್ವೀರ್ ಸೇಠ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ತನ್ವೀರ್ ಸೇಠ್ ದಾನ ಧರ್ಮ ಕೊಡುವುದು ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗಬಾರದು ಎಂದು ಹೇಳಿ, ನಾವು ದೇವರ ಬಗ್ಗೆ ಅಪಾರ ನಂಬಿಕೆ ಇಟ್ಟಿದ್ದೇವೆ. ನಾವು ಮಾಡುವ ಒಳ್ಳೆಯ ಕೆಲಸಗಳೇ ನಮ್ಮನ್ನು ಕಾಪಾಡುತ್ತವೆ ಎಂದರು.
ದೇಣಿ ಬಗ್ಗೆ ಕೇಳಲಾದ ಪ್ರಶ್ನೆಗೆ ತನ್ವೀರ್ ಸೇಠ್ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಉತ್ತರಿಸಿ ದೇಣಿಗೆ ಬಗ್ಗೆ ಸ್ಪಷ್ಟವಾಗಿ ಅವರು ಉತ್ತರಿಸಲಿಲ್ಲ.
ಲೆಕ್ಕ ವಿಚಾರದಲ್ಲಿ ಸರಿಯಾದ ಲೆಕ್ಕಕೊಡಬೇಕು. ಎಂದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು ಮೈಸೂರು ಪಾಲಿಕೆ ಮೇಯರ್ ಯಾರು ಆಗುತ್ತಾರೆ ಎಂಬುದನ್ನು ಕಾದು ನೋಡಿ ಎಂದರು.
ಮೈಸೂರು ಪಾಲಿಕೆ ಮೇಯರ್ ಚುನಾವಣೆ ಬಗ್ಗೆ ಫೆ. 20ರಂದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾಲಿಕೆ ಸದಸ್ಯರ ಸಭೆ ನಡೆಯಲಿದೆ. ನಾವು ಕೋಮುವಾದ ಶಕ್ತಿಯನ್ನು ದೂರ ಇಡಲು ಮುಂದಾಗಿದ್ದೇವೆ. ಇದಕ್ಕಾಗಿ ಜಾತ್ಯಾತೀತರು ಸೇರಿ ಅಧಿಕಾರ ಹಿಡಿಯುತ್ತೇವೆ ಎಂದರು.
ಜೆ.ಡಿ.ಎಸ್ ನವರು ಕೂಡ ವರಿಷ್ಠರ ಜೊತೆ ಚರ್ಚೆ ನಡೆಸಿದ್ದಾರೆ. ದೇವೆಗೌಡರ ಮೇಲೆ ನಮಗೆ ಅಪಾರ ಗೌರವ ಇದೆ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದರು.