ದಾಸಪಂಥದ ಸಂಗೀತ ಕಲಾ ಪ್ರಕಾರ ಬೆಳೆಯಲು ಸ್ಪೂರ್ತಿಯಾದವರು ಮಧ್ವಾಚಾರ್ಯರು -ಶಾಸಕ ಎಸ್ ಎ ರಾಮದಾಸ್

ಮೈಸೂರು: ಭಕ್ತಿಮಾರ್ಗದ ಪ್ರವರ್ತಕರಾದ ಮಧ್ವಾಚಾರ್ಯರು ಕನ್ನಡದಲ್ಲಿ ದಾಸಪಂಥದ ಮಾರ್ಗ ಸಂಗೀತ ಕಲಾ ಪ್ರಕಾರದೊಡನೆ ಬೆಳೆಯಲು ಸ್ಪೂರ್ತಿಯಾದವರು ಎಂದು ಶಾಸಕ ಎಸ್ ಎ ರಾಮದಾಸ್ ಅವರು ಹೇಳಿದರು.
ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ವತಿಯಿಂದ
ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ ಸಂಘದ ಆವರಣದಲ್ಲಿ ಮಧ್ವನವಮಿ ಅಂಗವಾಗಿ ಭಾನುವಾರ ಆಯೋಜಿಸಲಾಗಿದ್ದ ಮಧ್ವ ನಮನ ಕಾರ್ಯಕ್ರಮದಲ್ಲಿ ಮಧ್ವಾಚಾರ್ಯರ ಭಾವಚಿತ್ರಕ್ಕೆ ಶಾಸಕ ಎಸ್ ಎ ರಾಮದಾಸ್ ರವರು ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಮಧ್ವಾಚಾರ್ಯರು 74ನೇ ವಯಸ್ಸಿನಲ್ಲಿ ಬದರಿಕಾಶ್ರಮಕ್ಕೆ ಒಬ್ಬರೇ ಕಾಲ್ನಡಿಗೆಯಲ್ಲಿ ಪ್ರಯಾಣ ಹೋದ ದಿನವೇ ಮಧ್ವನವಮಿ ಎಂದು ಆಚರಿಸಲ್ಪಡುತ್ತದೆ ಎಂದು ಹೇಳಿದರು.
ಉಡುಪಿ ಜಿಲ್ಲೆಯ ಪಾಜಕ ಗ್ರಾಮದ ಮಧ್ಯಗೇಹ ಭಟ್ಟ ಮತ್ತು ವೇದವತಿ ದಂಪತಿಗಳಿಗೆ ಜನಿಸಿದ ಆನಂದತೀರ್ಥರು ಪೂರ್ವಾಶ್ರಮದ ಬಳಿಕ ವಾಸುದೇವ ಮಧ್ವಾಚಾರ್ಯರಾಗಿ 13ನೇ ಶತಮಾನದಲ್ಲಿ ದ್ವೈತ ಮತದ ಸ್ಥಾಪಕರಾಗಿ ತತ್ವಜ್ಞಾನಿಗಳಾದರು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಅಧ್ಯಕ್ಷ ಡಿಟಿ. ಪ್ರಕಾಶ್ ರವರು ಮಾತನಾಡಿ ಫೆ. 28ರಂದು ಸಿಂಧೂರ ಕನ್ವೆನ್ಷನ್ ಹಾಲ್ ನಲ್ಲಿ ವಿಪ್ರ ಸಮ್ಮಿಲನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಬ್ರಾಹ್ಮಣರ ಶ್ರೇಯೋಭಿವೃದ್ಧಿಗಾಗಿ ಹಲವಾರು ಸಂಘಟನಾತ್ಮಕÀ ಕಾರ್ಯಕ್ರಮಗಳನ್ನು ಕಾರ್ಯರೂಪಕ್ಕೆ ಕರತರಲಾಗುತ್ತಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮೈಸೂರಿನ ಬ್ರಾಹ್ಮಣ ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಚ್ ವಿ ರಾಜೀವ್, ಹಿರಿಯ ಸಮಾಜ ಸೇವಕ P.É ರಘುರಾಂ ವಾಜಪೇಯಿ, ವಾಸುದೇವ್ ಭಟ್, ಯುವ ಮುಖಂಡ ಎನ್ ಎಂ ನವೀನ್ ಕುಮಾರ್, ನಗರ ಪಾಲಿಕಾ ಸದಸ್ಯ ಮಾ ವಿ ರಾಮ್ ಪ್ರಸಾದ್, ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಗೋಪಾಲ್ ರಾವ್, ಬ್ರಾಹ್ಮಣ ಯುವ ವೇದಿಕೆ ಗೌರವಾಧ್ಯಕ್ಷ ಮುಳ್ಳೂರು ಗುರುಪ್ರಸಾದ್, ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ರಂಗನಾಥ್, ಟಿ ಎಸ್ ಅರುಣ್, ಸುಚೇಂದ್ರ, ಜ್ಯೋತಿ, ಲತಾ ಬಾಲಕೃಷ್ಣ, ಶಂಕರ್ ನಾರಾಯಣ್ ಹಾಗೂ ಇನ್ನಿತರರು ಇದೇ ಸಂದರ್ಭದಲ್ಲಿ ಹಾಜರಿದ್ದರು.