ಕರ್ನಾಟಕ ಪೆÇಲೀಸ್ ಇಲಾಖೆ ದೇಶದಲ್ಲೇ ನಂಬರ್ 1 -ಸಚಿವ ಎಸ್.ಟಿ.ಎಸ್

ಮೈಸೂರು: ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದ ಪೆÇಲೀಸರು ನಂಬರ್ 1 ಆಗಿದ್ದಾರೆ. ನಮ್ಮ ಪೆÇಲೀಸ್ ಇಲಾಖೆ ದೇಶದಲ್ಲಿಯೇ ಮಾದರಿ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ನಗರದಲ್ಲಿನ ಪೆÇೀಲಿಸ್ ಅಕಾಡೆಮಿಯಲ್ಲಿ ಮಂಗಳವಾರ ನಡೆದ ಡಿವೈಎಸ್ಪಿ ಹಾಗೂ ಪೆÇಲೀಸ್ ಸಬ್ ಇನ್ಸ್ ಪೆಕ್ಟರ್ ಬ್ಯಾಚ್ ನ ಪ್ರಶಿಕ್ಷಣಾರ್ಥಿಗಳ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.
ಯಾವುದೇ ರಾಜ್ಯಕ್ಕೆ ಹೋಗಲಿ ಕರ್ನಾಟಕ ಪೆÇಲೀಸ್ ಬಗ್ಗೆ ಅಭಿಮಾನ ಹಾಗೂ ಮಾದರಿಯಾಗಿ ಹೇಳಲಾಗುತ್ತದೆ ಎಂದು ಅಭಿಮಾನವನ್ನು ಸಚಿವರು ವ್ಯಕ್ತಪಡಿಸಿದರು.
ಕರ್ನಾಟಕ ಪೆÇಲೀಸ್ ಅಕಾಡೆಮಿ ನಿರ್ದೇಶಕ ವಿಪುಲ್ ಕುಮಾರ್ ಅವರು ಸಮರ್ಥ ಹಾಗೂ ದಕ್ಷ ಪೆÇಲೀಸ್ ಅಧಿಕಾರಿಯಾಗಿದ್ದಾರೆ. ಅವರ ನೇತೃತ್ವದಲ್ಲಿ ಅಕಾಡೆಮಿಯಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಸಚಿವ ಸೋಮಶೇಖರ್ ಶ್ಲಾಘನೆ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ನಾನು ಕಳೆದ ಒಂದು ವರ್ಷದಿಂದ ಸಂಚರಿಸುತ್ತಿದ್ದೇನೆ. ಇದುವರೆಗೆ ಒಂದು ಸಣ್ಣ ಗಲಾಟೆ ಸಹ ಆಗಿಲ್ಲ. ಕೋವಿಡ್ ಸಂದರ್ಭದಲ್ಲಿಯೂ ಸಹ ಉತ್ತಮವಾಗಿ ಪೆÇೀಲಿಸರು ಕಾರ್ಯನಿರ್ವಹಣೆ ಮಾಡಿದ್ದಾರೆ ಎಂದು ಹೇಳಿದರು.
ಪೆÇಲೀಸರು ಉತ್ತಮ ತರಬೇತಿ ಪಡೆಯಬೇಕು. ಯಾವುದೇ ಒಂದು ಪ್ರಕರಣ ಇರಲಿ, ಅದರ ಸಂಪೂರ್ಣ ಆಯಾಮದಲ್ಲಿ ತನಿಖೆ ನಡೆಸಬೇಕಿದೆ. ನೀವು ದಕ್ಷ, ಪ್ರಾಮಾಣಿಕ ಅಧಿಕಾರಿಯಾದರೆ ಜನರೇ ಅಭಿಮಾನಿಸುವುದರ ಜೊತೆಗೆ ಕ್ರಿಮಿನಲ್ ಗಳು ಹೆದರುತ್ತಾರೆ ಎಂದು ಸಚಿವರು ತಿಳಿಸಿದರು.
ಜನಪ್ರತಿನಿಧಿಗಳು ಹಾಗೂ ಪೆÇಲೀಸ್ ಇಲಾಖೆ ನಡುವೆ ಯಾವ ರೀತಿ ಸಮನ್ವಯತೆ ಇರುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜನಪ್ರತಿನಿಧಿಗಳು ಸಾಮಾನ್ಯವಾಗಿ ಅಕ್ರಮಗಳಿಗೆ ಅವಕಾಶ ಕೊಡುವುದಿಲ್ಲ. ಜೊತೆಗೆ ಹಸ್ತಕ್ಷೇಪ ಮಾಡುವುದಿಲ್ಲ. ನೀವು ನಿಮ್ಮ ವ್ಯಾಪ್ತಿಯಲ್ಲಿ ದಕ್ಷತೆಯಿಂದ ಪ್ರಾಮಾಣಿಕತೆಯಿಂದಿದ್ದರೆ ಜನಪ್ರತಿನಿಧಿಗಳೂ ಸಹ ಗೌರವವನ್ನು ಕೊಡುತ್ತಾರೆ ಎಂದು ತಿಳಿಸಿದರು.
ಸಹಕಾರ ಸಂಸ್ಥೆಗಳಲ್ಲಿ ಕೋಟ್ಯಂತರ ರೂಪಾಯಿ ಹಣ ಅವ್ಯವಹಾರ ಆಗುತ್ತಿರುವ ಬಗ್ಗೆ ಪ್ರಶಿಕ್ಷಣಾರ್ಥಿಯೊಬ್ಬರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸುಮಾರು 280 ಕೋ ಆಪರೇಟಿವ್ ಬ್ಯಾಂಕ್ ಗಳಿವೆ. ಇದರಲ್ಲಿ ಸುಮಾರು 3-4 ಬ್ಯಾಂಕಗಳಿಂದ ಅವ್ಯವಹಾರಗಳಾಗಿವೆ. ಉದಾಹರಣೆಗೆ ಹೇಳುವುದಾದರೆ ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಆಡಳಿತ ಮಂಡಳಿ ಹಾಗೂ ಡೆವಲಪರ್ಸ್ ನಡುವೆ ಒಪ್ಪಂದವಾಗಿ ಕೋಟ್ಯಂತರ ರೂಪಾಯಿ ಅವ್ಯವಹಾರ ಮಾಡಲಾಗಿತ್ತು. ಇದಕ್ಕಾಗಿ ಕಠಿಣ ಕಾನೂನುಗಳನ್ನು ರೂಪಿಸುತ್ತಿದ್ದು ಅವರ ಆಸ್ತಿಗಳನ್ನು ಜಪ್ತಿ ಮಾಡಲಾಗುವುದು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಕರ್ನಾಟಕ ಪೆÇಲೀಸ್ ಅಕಾಡೆಮಿ ನಿರ್ದೇಶಕರಾದ ವಿಪುಲ್ ಕುಮಾರ್ ಮಾತನಾಡಿ, ಎಸ್.ಟಿ.ಸೋಮಶೇಖರ್ ಅವರು ಉಸ್ತುವಾರಿ ಸಚಿವರಾಗಿ ಮೈಸೂರಿಗೆ ಆಗಮಿಸಿದಾಗ ನಾನು ಹೋಗಿ ನಮಗೆ ನಿಮ್ಮಿಂದ ಸಲಹೆಗಳಿದ್ದರೆ ಯಾವುದೇ ಸಮಯದಲ್ಲಿ ಕೊಡಬಹುದು ಎಂದು ಹೇಳಿದೆ. ಅದಕ್ಕವರು ತಾವು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದರು. ಅದರಂತೆ ಇಲ್ಲಿಯವರೆಗೂ ಯಾವುದೇ ಒಂದು ವರ್ಗಾವಣೆ ಸಂಬಂಧ ಸಹ ಸಚಿವರಾದ ಸೋಮಶೇಖರ್ ಅವರು ಹಸ್ತಕ್ಷೇಪ ಮಾಡಿಲ್ಲ ಎಂದು ತಿಳಿಸಿದರು.