ಮೈಸೂರು: ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಬೋನಿನಲ್ಲಿ ಸೆರೆ ಆಗಿದೆ.
ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಇದೀಗ ಚಿರತೆ ಬೋನಿಗೆ ಬಿದ್ದಿದೆ.
ಹೆಬ್ಬಲಗುಪ್ಪೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದರು.
ಕಾರ್ಯಪ್ರವೃತ್ತರಾದ ಅರಣ್ಯ ಇಲಾಖಾ ಸಿಬ್ಬಂದಿಗಳು ಚಿರತೆ ಸೆರೆಗೆ ಬೋನನ್ನು ಗ್ರಾಮದಲ್ಲಿ ತಂದಿರಿಸಿದ್ದರು.
ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಆಗಿದೆ.