ಮೈಸೂರಿಗೆ ಇನ್ನೂ 1 ಲಕ್ಷ ಕೋವೀಡ್ ಲಸಿಕೆ -ಎಸ್.ಟಿ.ಎಸ್.

ಮೈಸೂರು: ಮೈಸೂರು ಜಿಲ್ಲೆಗೆ ಸದ್ಯದಲ್ಲೇ ಇನ್ನೂ 1 ಲಕ್ಷ ಕೋವಿಡ್ ಲಸಿಕೆ ಪೂರೈಕೆಯಾಗಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ಕೋವಿಡ್ ಪರಿಸ್ಥಿತಿ ಬಗ್ಗೆ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಜಿಲ್ಲೆಗೆ ಇನ್ನೂ 5 ಲಕ್ಷ ಲಸಿಕೆ ಬೇಕು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಜ್ಯಕ್ಕೆ 15 ಲಕ್ಷ ಲಸಿಕೆ ಬಂದಿದೆ. ಮೈಸೂರಿನಲ್ಲಿ ಪ್ರಕರಣ ಹೆಚ್ಚುತ್ತಿರುವರಿಂದ ಕೂಡಲೇ ಮೈಸೂರಿಗೆ 2 ಲಕ್ಷ ಲಸಿಕೆ ನೀಡುವಂತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರಿಗೆ ದೂರವಾಣಿಯಲ್ಲಿ ಕೇಳಿದ್ದೇನೆ ಎಂದರು.
ಈಗ 1 ಲಕ್ಷ ಲಸಿಕೆ ನೀಡಲಾಗುವುದು, ಹಂತ ಹಂತವಾಗಿ ಬೇಡಿಕೆಗೆ ಅನುಗುಣವಾಗಿ ಪೂರೈಸಲಾಗುವುದು ಎಂದು ಡಾ. ಸುಧಾಕರ್ ಅವರು ತಿಳಿಸಿರುವುದಾಗಿ ಸಚಿವರು ಹೇಳಿದರು.
ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಎರಡೂ ಪರಿಣಾಮಕಾರಿ ಲಸಿಕೆಗಳು. ಲಸಿಕೆ ಪ್ರಮಾಣವನ್ನು ಹೆಚ್ಚಿಸಲಾಗುತ್ತಿದೆ. ಮಾರುಕಟ್ಟೆ ಮುಂತಾದ ಜನಸಂದಣಿ ಪ್ರದೇಶದಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಲಾಗುವುದು ಎಂದರು.
ಯಾವ ಪ್ರವಾಸಿ ತಾಣವನ್ನು ಸ್ಥಗಿತಗೊಳಿಸುವುದಿಲ್ಲ. ಕೆಲವು ನಿಬರ್ಂಧಗಳನ್ನು ಮಾಡಲು ತೀರ್ಮಾನಿಸಿದ್ದೇವೆ. ಊರ ಹಬ್ಬ, ಸಣ್ಣ ಪುಟ್ಟ ಜಾತ್ರೆಗಳನ್ನು ಆಯೋಜಿಸಲು ಅನುಮತಿ ಪಡೆದುಕೊಳ್ಳಬೇಕು. ಕೆಲವು ನಿಬರ್ಂಧಗಳನ್ನು ಹಾಕಿ ಅನುಮತಿ ನೀಡಲು ನಿರ್ಧರಿಸಿದ್ದೇವೆ ಎಂದರು.
ಚಿಕಿತ್ಸೆಗೆ ಬೇಕಾದ ಎಲ್ಲಾ ಸೌಕರ್ಯಗಳು ಇವೆ. ಯಾವುದೇ ಕೊರತೆ ಇಲ್ಲ ಎಂದರು. ಕೋವಿಡ್ ನಿಯಂತ್ರಣ ಕ್ರಮಗಳನ್ನು ಗಂಭೀರವಾಗಿ ತೆಗೆದುಕೊಳ್ಳಲಾಗುತ್ತಿದೆ ಎಂದರು.
ಸಭೆಯಲ್ಲಿ ಶಾಸಕ ಎಲ್. ನಾಗೇಂದ್ರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಸಿ.ಪರಿಮಳ ಶ್ಯಾಂ, ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪೆÇಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಜಿಲ್ಲಾ ಪೆÇಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯಿತಿ ಸಿ.ಇ.ಇ. ಎ.ಎಂ.ಯೋಗೀಶ್, ಮೆಡಿಕಲ್ ಕಾಲೇಜಿನ ಡೀನ್, ಡಾ. ನಂಜರಾಜ, ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ. ರಾಜೇಶ್ವರಿ, ಡಿ.ಹೆಚ್.ಒ. ಡಾ. ಟಿ. ಅಮರನಾಥ್, ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.