ಮೈಸೂರು: ನಗರದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಏ. 10ರಿಂದ 20ರವೆರೆಗೆ ಮೈಸೂರಿನ ಪ್ರವಾಸಿ ತಾಣಗಳು, ರೆಸಾರ್ಟ್, ಹೊಟೇಲ್, ಚಿತ್ರಮಂದಿರಗಳಿಗೆ ಕೋವಿಡ್ ಟೆಸ್ಟ್ ರಿಪೆÇೀರ್ಟ್ ಕಡ್ಡಾಯ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೇಳಿದರು.
ನಗರದಲ್ಲಿ ಜಿಲ್ಲಾಧಿಕಾರಿಗಳು ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಏ. 10ರಿಂದ ಸಾಲು, ಸಾಲು ರಜೆಗಳಿದ್ದು, ಮೈಸೂರಿನ ಯಾವುದೇ ಪ್ರವಾಸಿ ತಾಣಗಳಿಗೆ ನಿಬರ್ಂಧವಿಲ್ಲ ಎಂದವರು ಹೇಳಿ, ಈ ಸ್ಥಳಗಳಿಗೆ ಭೇಟಿ ನೀಡುವವರಿಗೆ ಕೋವಿಡ್ ಟೆಸ್ಟ್ ರಿಪೆÇೀರ್ಟ್ ಕಡ್ಡಾಯ ಎಂದು ಅವರು ತಿಳಿಸಿದರು.
ಪ್ರವಾಸಿ ತಾಣಗಳಲ್ಲಿ ಕೊರೊನಾ ವರದಿ ತಪಾಸಣೆಗಾಗಿ 300 ಮಂದಿ ಹೋಮ್ ಗಾರ್ಡ್ ನೇಮಕ ಮಾಡಲಾಗುವುದು ಎಂದರು.
ನಗರ ಪ್ರದೇಶದಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ಹಾಗಾಗಿ ಬೆಂಗಳೂರಿನಿಂದ ಮೈಸೂರಿಗೆ ಬರುವವರು ಕೊರೊನಾ ನೆಗೆಟಿವ್ ವರದಿ ತಂದರೆ ಒಳ್ಳೆಯದು ಎಂದು ಅವರು ಹೇಳಿದರು.
ಸಭೆ, ಸಮಾರಂಭ ನಡೆಸುವುದಕ್ಕೆ ಪೆÇಲೀಸರ ಅನುಮತಿಯನ್ನು ಪಡೆಯಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದರು.
ಸುದಿಗೋಷ್ಠಿಯಲ್ಲಿ ಪೆÇಲೀಸ್ ಆಯುಕ್ತ ಡಾ.ಚಂದ್ರಗುಪ್ತ ಉಪಸ್ಥಿತರಿದ್ದರು.