ಉಪಚುನಾವಣೆಗೆ ಸರ್ಕಾರಿ ಅಧಿಕಾರಿಗಳಿಂದ ಹಫ್ತಾ ವಸೂಲಿ -ಎಂ.ಲಕ್ಷ್ಮಣ್

ಮೈಸೂರು: ಉಪಚುನಾವಣೆಗೆ ಸರ್ಕಾರಿ ಅಧಿಕಾರಿಗಳಿಂದ ಹಫ್ತಾ ವಸೂಲಿ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದರು.
ನಗರದಲ್ಲಿ ಶುಕ್ರವಾರ ಎಂ.ಲಕ್ಷ್ಮಣ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
8 ಮಂದಿ ಮಂತ್ರಿಗಳ ಇಲಾಖೆಯಿಂದ 500 ಕೋಟಿ ಹಣವನ್ನು ಸಂಗ್ರಹಿಸಲಾಗಿದೆ ಎಂದು ಎಂ.ಲಕ್ಷ್ಮಣ್ ಹೇಳಿದರು.
ಅಬಕಾರಿ ಅಧಿಕಾರಿಗಳಿಂದ 1 ಕೋಟಿಯವರೆಗೂ ಹಣ ಪಡೆಯಲಾಗುತ್ತಿದೆ ಎಂದವರು ತಿಳಿಸಿದರು.
ಸರಕಾರಿ ವಾಹನಗಳಲ್ಲಿಯೇ ಹಣವನ್ನು ಸಾಗಾಟ ನಡೆಸಲಾಗುತ್ತಿದೆ ಎಂದು ಲಕ್ಷ್ಮಣ್ ಹೇಳಿದರು.