ಸಾರ್ವಜನಿಕರಿಗೆ ವಿರುದ್ಧವಾದ ಯಾವುದನ್ನೂ ಈ ವರೆಗೆ ಮಾಡಿಲ್ಲ -ಸಚಿವ ಎಸ್.ಟಿ.ಎಸ್.

ಮೈಸೂರು: ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಬೇಕಾದರೆ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಕೊಡುಗೆ ಇದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ಬುಧವಾರ ನಗರದ ಪುರಭವನದ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಅವರು ಡಾ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ನೀಡಿದ ಆದ್ಯತೆ, ಮೀಸಲಾತಿಯ ಕೊಡುಗೆಯನ್ನು ಸ್ಮರಿಸಿದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತರತ್ನ ನೀಡಿ, ಗೌರವ ಸಲ್ಲಿಸಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹೆಲಿಟೂರಿಸಂ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅರಣ್ಯ ಇಲಾಖೆ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿಂದ ತಕರಾರು ಇದ್ದರೆ ಸಲ್ಲಿಸುವಂತೆ ಕೋರಿದ್ದಾರೆ. ಸಾರ್ವಜನಿಕರಿಗೆ ವಿರುದ್ಧವಾದ ಯಾವುದನ್ನೂ ನಾವೂ ಈ ವರೆಗೆ ಮಾಡಿಲ್ಲ. ಸಾರ್ವಜನಿಕರ ಅಭಿಪ್ರಾಯಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ ಎಂದರು.
ಹಿರಿಯ ಪೆÇಲೀಸ್ ಅಧಿಕಾರಿಗಳೊಂದಿಗೆ ಬೆಳಗ್ಗೆ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದ್ದೇನೆ. ಇತ್ತೀಚೆಗೆ
ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಬೆಂಕಿ ಹಾಕಿದವರು ಎμÉ್ಟೀ ದೊಡ್ಡವರಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಘಟನೆ ಆಗಬಾರದು ಎಂದು ಪೆÇಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ ಎಂದರು.
ಮೈಸೂರಿನಲ್ಲಿ ಕ್ಲಬ್‍ಗಳು ಅತಿಯಾಗುತ್ತಿವೆ. ಕೆಲವು ಪೆÇಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕ್ಲಬ್‍ಗಳು ಹಣದ ದಂಧೆ ಮಾಡುತ್ತಿವೆ ಎಂಬ ಮಾಹಿತಿ ಇದೆ ಎಂದರು.
ಕೊರೊನಾ ಲಸಿಕೆ ಮೈಸೂರಿಗೆ 5 ಲಕ್ಷ ಬೇಕಾಗಿತ್ತು. 1.5 ಲಕ್ಷ ಕೊಟ್ಟಿದ್ದಾರೆ. ಇನ್ನೂ 3.5 ಲಕ್ಷ ಡೋಸ್ ಲಸಿಕೆ ಬರಬೇಕಾಗಿದೆ. ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಕೇಂದ್ರ ಸರ್ಕಾರದಿಂದ ಲಸಿಕೆ ಬರಬೇಕಾಗಿದೆ. ಬಂದಕೂಡಲೇ ಎಲ್ಲರಿಗೂ ಲಸಿಕೆ ಸಿಗಲಿದೆ ಎಂದರು.
ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಲಸಿಕೆಯನ್ನು ಸಹ ನೀಡಲಾಗುತ್ತಿದೆ. ಹೊರಗಿನಿಂದ ಮೈಸೂರಿಗೆ ಬರುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಆದರೂ ಸಹ ನಿಯಂತ್ರಣ ಆಗುತ್ತಿದೆ ಎಂದರು.
ಪರಿಣಿತರ ಸಮಿತಿ ಇತ್ತೀಚೆಗೆ ಮೈಸೂರಿಗೆ ಬಂದು ಕೆಲವು ಅಂಶಗಳ ಬಗ್ಗೆ ಸಲಹೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಅವುಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದರು.
ಮೈಸೂರಿನಲ್ಲಿ ಡಾ. ಅಂಬೇಡ್ಕರ್ ಭವನದ ಕಾಮಗಾರಿ ಮುಂದುವರಿಸುವ ಬಗ್ಗೆ ಮಾತನಾಡಿದ ಅವರು, ಆರ್ಥಿಕ ಇಲಾಖೆಯಿಂದ ಕೆಲವು ಮಾಹಿತಿಯನ್ನು ಕೇಳಿದ್ದಾರೆ. ಸಮಾಜ ಕಲ್ಯಾಣ ಸಚಿವರಾದ ಶ್ರೀರಾಮುಲು ಅವರು ಈ ಅಂಶಗಳ ಬಗ್ಗೆ ಮಾಹಿತಿ ನೀಡುವಂತೆ ಹಿಂದಿರುಗಿಸಿದ್ದಾರೆ. ಸ್ಥಳೀಯವಾಗಿ ಮಾಹಿತಿ ಪಡೆದು ಪುನಃ ಸಲ್ಲಿಸಲಾಗುವುದು ಎಂದರು.
ಉಪಚುನಾವಣೆಗಳ ಬಗ್ಗೆ ಮಾತನಾಡಿದ ಅವರು ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಿದ್ದೇನೆ. ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ಈ ಮೂರು ಕ್ಷೇತ್ರದಲ್ಲಿ ನಾವು ಗೆಲುವು ಸಾಧಿಸುತ್ತೇವೆ ಎಂದರು.
ಡಾ. ಬಿ.ಆರ್.ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಮಾಲಾರ್ಪಣೆ ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಧರ್ಮಸೇನ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಲ್. ನಾಗೇಂದ್ರ, ಹರ್ಷವರ್ಧನ್, ಮೇಯರ್ ರುಕ್ಮಿಣಿ ಮಾದೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಿ.ಸಿ.ಪರಿಮಳ ಶ್ಯಾಂ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ. ಶಿವಣ್ಣ, ಮುಡಾ ಅಧ್ಯಕ್ಷರಾದ ಎಚ್.ವಿ.ರಾಜೀವ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪೆÇಲೀಸ್ ಆಯುಕ್ತ ಡಾ. ಚಂದ್ರಗುಪ್ತ ಮತ್ತಿತರರು ಉಪಸ್ಥಿತರಿದ್ದರು.