ಶಾಸಕ ರಾಮದಾಸ್ ರಿಗೆ ಕೊರೊನಾ ಪಾಸಿಟಿವ್; ಜನಪ್ರತಿನಿಧಿಗಳು, ಗಣ್ಯರಲ್ಲಿ ಆತಂಕ

ಮೈಸೂರು: ಶಾಸಕ ಎಸ್. ಎ. ರಾಮದಾಸ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಆದರೆ ಶಾಸಕ ರಾಮದಾಸ್ ಅವರು ಬುಧವಾರ ನಗರದಲ್ಲಿ ನಡೆದ ಹಲವು ಸಮಾರಂಭದಲ್ಲಿ ಭಾಗವಹಿಸಿದ್ದು, ಇದರಿಂದ ಹಲವಾರು ಮಂದಿ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳಲ್ಲಿ ಆತಂಕ ಉಂಟು ಮಾಡಿದೆ.
ಕೊರೊನಾ ಸೋಂಕು ದೃಢಪಟ್ಟ ನಂತರ ಕೋವಿಡ್ ಆಸ್ಪತ್ರೆಗೆ ದಾಖಲಾಗಬೇಕು ಅಥವಾ ಹೋಂ ಐಸೋಲೇಷನ್ ನಲ್ಲಿರಬೇಕು.
ಆದರೆ ರಾಮದಾಸ್ ನಗರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ರಾಮದಾಸ್ ಅವರಿಗೆ ಸೋಂಕಿನ ಲಕ್ಷಣ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆಗಾಗಿ ಶಾಸಕರು ಸ್ಯಾಂಪಲ್ ನೀಡಿದ್ದರು.
ಇದೀಗ ಶಾಸಕ ರಾಮದಾಸ್ ಸಭೆ ಸಮಾರಂಭಗಳಲ್ಲಿ ಪಾಲ್ಗೊಂಡ ನಂತರ ವರದಿ ಬಂದಿದ್ದು, ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಬುಧವಾರ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ರಾಮದಾಸ್ ಭಾಗಿಯಾಗಿದ್ದರಿಂದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಶಾಸಕ ಎಲ್. ನಾಗೇಂದ್ರ, ಮುಡಾ ಅಧ್ಯಕ್ಷ ರಾಜೀವ್, ಸಂಸದ ಪ್ರತಾಪ್ ಸಿಂಹ, ಮೇಯರ್ ರುಕ್ಮಿಣಿ ಮಾದೇಗೌಡ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸೇರಿದಂತೆ ಇನ್ನು ಹಲವಾರು ಮಂದಿ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳಲ್ಲಿ ಆತಂಕ ಉಂಟಾಗಿದೆ.