ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಕೊರೊನಾ 2ನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಇದೇ ಏ. 15ರಿಂದ ಮೇ 15ರ ವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ.
ಮೈಸೂರು ಜಿಲ್ಲೆಯ ದಕ್ಷಿಣಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯವು ಕೇಂದ್ರೀಯ ಪುರಾತತ್ವ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಸದರಿ ಇಲಾಖೆ ಆದೇಶದಂತೆ ಕೋವಿಡ್ – 19 ಸೋಂಕು ಹೆಚ್ಚಾಗಿ ಹರಡುತ್ತಿರುವ ಕಾರಣ, ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಆದರೆ ದೇವಾಲಯದಲ್ಲಿ ಎಂದಿನಂತೆ ಪ್ರತಿದಿನ ಪೂಜಾ ಕೈಂಕರ್ಯಗಳು ನಡೆಯಲಿವೆ.