ಬಾವಲಿ ಚೆಕ್ ಪೆÇೀಸ್ಟ್‍ನಲ್ಲಿ ಕೋವಿಡ್ ನಿಯಂತ್ರಣ ಕ್ರಮ ಪರಿಶೀಲಿಸಿದ ಸಚಿವ ಎಸ್.ಟಿ.ಎಸ್.

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಕರ್ನಾಟಕ -ಕೇರಳ ಗಡಿಪ್ರದೇಶ ಬಾವಲಿ ಚೆಕ್ ಪೆÇೀಸ್ಟ್‍ಗೆ ಬುಧವಾರ ಭೇಟಿ ನೀಡಿ ಕೋವಿಡ್ ನಿಯಂತ್ರಣ ಕ್ರಮ ಕುರಿತು ಪರಿಶೀಲನೆ ನಡೆಸಿದರು.
ಕೇರಳದಲ್ಲಿ ಕೋವಿಡ್ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಗಡಿ ಪ್ರವೇಶಿಸುವ ಎಲ್ಲರು ಆರ್.ಟಿ.ಪಿಸಿ.ಆರ್. ಪರೀಕ್ಷೆ ವರದಿ ನೆಗಿಟಿವ್ ಇರುವುದನ್ನು ತರಬೇಕು ಎಂಬುದನ್ನು ಕಡ್ಡಾಯ ಮಾಡಲಾಗಿದೆ. ವರದಿ ಇಲ್ಲದೆ ಬರುವವರನ್ನು ವಾಪಸ್ ಕಳುಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.
ಕೋವಿಡ್ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಹಜವಾಗಿಯೇ ವಾಹನಗಳ ಸಂಖ್ಯೆ ಕಡಿಮೆಯಾಗಿದೆ. ಸುಮಾರು 120 ರಿಂದ 130 ವಾಹನಗಳು ಮಾತ್ರ ಈಗ ಬರುತ್ತಿವೆ. ಎಲ್ಲಾ ವಾಹನಗಳಲ್ಲಿರುವ ಪ್ರಯಾಣಿಕರ ಕೋವಿಡ್ ವರದಿ ಪರಿಶೀಲಿಸಲಾಗುತ್ತಿದೆ.
ಕೋವಿಡ್ ಪರೀಕ್ಷೆ ಮಾಡಿಸದೆಯೂ ಬರುವ ಪ್ರಯಾಣಿಕರಿಗೆ ಪರೀಕ್ಷೆ ಮಾಡಲು ಕೇರಳ ಸರ್ಕಾರ ಗಡಿಯಲ್ಲಿ ಸ್ಯಾಂಪಲ್ ಸಂಗ್ರಹ ಕೇಂದ್ರವನ್ನು ಮಂಗಳವಾರದಿಂದ ತೆರೆದಿದೆ. ನಮ್ಮಲ್ಲೂ ಆ ರೀತಿ ಸ್ಯಾಂಪಲ್ ಸಂಗ್ರಹ ಕೇಂದ್ರ ತೆರೆಯಲು ಚರ್ಚಿಸಿ ಕ್ರಮವಹಿಸಲಾಗುವುದು ಎಂದರು.
ಕರ್ನಾಟಕದ ರೈತರು ಬೆಳೆದ ತರಕಾರಿ ಹೆಚ್ಚಾಗಿ ಈ ಗಡಿ ಮೂಲಕ ಕೇರಳಕ್ಕೆ ಸಾಗಣೆಯಾಗುತ್ತದೆ. ನಮ್ಮ ರೈತರಿಗೆ ತೊಂದರೆಯಾಗದಂತೆ ಕ್ರಮವಹಿಸಿದ್ದೇವೆ. ಸಾವು-ನೋವಿನ ಸಂದರ್ಭದಲ್ಲಿ ತುರ್ತಾಗಿ ಪ್ರಯಾಣಿಸಬೇಕಾದವರಿಗೂ ಸಹ ತೊಂದರೆಯಾಗದಂತೆ ಪ್ರಯಾಣಕ್ಕೆ ಸೂಕ್ತ ಅವಕಾಶ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಸಿ.ಬಿ.ರಿಷ್ಯಂತ್, ತಹಶೀಲ್ದಾರ್ ನರಗುಂದ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.