ಮೈಸೂರು: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಏ. 21ರ ರಾತ್ರಿ 9ಗಂಟೆಯಿಂದ ಮೇ 4ರ ಬೆಳಿಗ್ಗೆ 6 ಗಂಟೆಯವರೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ರದ್ದುಪಡಿಸಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.