ಚಾಮರಾಜನಗರ: ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್-19 ಹರಡುವಿಕೆ ತಡೆಗಟ್ಟಲು ಜಿಲ್ಲೆಯಲ್ಲಿ ಏ. 23ರ ಶುಕ್ರವಾರ ರಾತ್ರಿ 9 ಗಂಟೆಯಿಂದ ಏ. 26ರ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಮತ್ತು ಏ. 30ರ ಶುಕ್ರವಾರ ರಾತ್ರಿ 9 ಗಂಟೆಯಿಂದ ಮೇ 3ರ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವಾರಾಂತ್ಯ ಕಫ್ರ್ಯೂ ಜಾರಿಗೊಳಿಸಿ ಆದೇಶಿಸಿದ್ದು ಸಾರ್ವಜನಿಕರು ಪಾಲಿಸಬೇಕಿರುವ ಅನುಸರಣಾ ಕ್ರಮಗಳನ್ನು ವಿಧಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶಿಸಿದ್ದಾರೆ.
ತುರ್ತು ಸೇವೆ ನೀಡುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಅನಿಯಂತ್ರಿತ ಚಲನೆಗೆ ಅನುಮತಿಸಿದೆ. ತುರ್ತು ಸೇವೆ ಮತ್ತು ಅಗತ್ಯ ಸೇವೆಗಳೊಂದಿಗೆ 24*7 ಕಾರ್ಯಚರಣೆಯನ್ನು ನಿರ್ವಹಿಸುತ್ತಿರುವ ಎಲ್ಲಾ ಕೈಗಾರಿಕೆಗಳು, ಕಂಪನಿಗಳು, ಸಂಸ್ಥೆಗಳು ನೀಡುವ ಗುರುತಿನ ಚೀಟಿಯೊಂದಿಗೆ ನೌಕರರ ಚಲನೆಯನ್ನು ಅನುಮತಿಸಿದೆ. ಟೆಲಿಕಾಂ ಮತ್ತು ಇಂಟರ್ನೆಟ್ ಸೇವೆಗಳನ್ನು ಒದಗಿಸುವ ಸಂಸ್ಥೆಗಳು, ಕಂಪನಿಯ ವಾಹನ ಮತ್ತು ಸಿಬ್ಬಂದಿ ಅಧಿಕೃತ ಗುರುತಿನ ಚೀಟಿಯೊಂದಿಗೆ ಸಂಚರಿಸಲು ಅನುಮತಿಸಿದೆ.
ತುರ್ತು ವೈದ್ಯಕೀಯ ಸಂದರ್ಭದಲ್ಲಿ ರೋಗಿಗಳು ಮತ್ತು ರೋಗಿಯ ಸಂಬಂಧಿಕರು ಸಂಚರಿಸಲು ಅನುಮತಿ ನೀಡಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಆಹಾರ, ದಿನಸಿ, ಹಣ್ಣುಗಳು ಮತ್ತು ಅಗತ್ಯ ವಸ್ತುಗಳನ್ನು ಮಾರಾಟ ಮಾಡಲು ಅನುಮತಿ ನೀಡಿದೆ. ದೂರದ ಊರುಗಳಿಂದ ಬರುವ ಮತ್ತು ತೆರಳುವ ಬಸ್, ರೈಲು, ಖಾಸಗಿ ವಾಹನ, ಟ್ಯಾಕ್ಸಿಗಳಿಗೆ ಅನುಮತಿಸಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳು ತಿಂಡಿ ತಿನಿಸುಗಳನ್ನು ತೆಗೆದುಕೊಂಡು ಹೋಗಲು ಮತ್ತು ಮನೆಗೆ ತಲುಪಿಸಲು ಮಾತ್ರ ಅನುಮತಿ ನೀಡಿದೆ.
ಕೋವಿಡ್-19ರ ಮಾರ್ಗಸೂಚಿ ಅನುಸರಿಸಿ ಗರಿಷ್ಠ 50 ಜನರು ಮೀರದಂತೆ ಮದುವೆ ನಡೆಸಲು ಅನುಮತಿ ನೀಡಲಾಗಿದೆ. ಕೋವಿಡ್-19ರ ಮಾರ್ಗಸೂಚಿ ಅನುಸರಿಸಿ 20 ಜನರು ಮೀರದಂತೆ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುಮತಿಸಲಾಗಿದೆ.
ಎಲ್ಲಾ ಸಿನಿಮಾ ಹಾಲ್ ಗಳು, ಶಾಪಿಂಗ್ ಮಾಲ್ ಗಳು, ಜಿಮ್, ಯೋಗಾ ಸೆಂಟರ್, ಸ್ವಿಮ್ಮಿಂಗ್ ಪೂಲ್, ಮನರಂಜನೆ, ಅಮ್ಯೂಸ್ ಮೆಂಟ್ ಪಾರ್ಕ್, ಸ್ಪೋಟ್ರ್ಸ್ ಕಾಂಪ್ಲೆಕ್ಸ್, ಸ್ಪಾ, ಬಾರ್, ಆಡಿಟೋರಿಯಂ, ನಾಟಕ ಪ್ರದರ್ಶನ, ಅಸೆಂಬ್ಲಿಹಾಲ್, ಸೆಮಿನಾರ್ ಹಾಲ್ ಮುಚ್ಚಲು ಆದೇಶಿಸಿದೆ.
ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಸಾಂಸ್ಕøತಿಕ, ಧಾರ್ಮಿಕ, ಗುಂಪು ಚಟುವಟಿಕೆಗಳನ್ನು ನಿಭರ್ಂಧಿಸಿದೆ.
ಜಿಲ್ಲೆಯ ಎಲ್ಲಾ ದೇವಸ್ಥಾನ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸಾಂಪ್ರಾದಾಯಿಕ ಪೂಜಾ ವಿಧಿ ವಿಧಾನಗಳ ಆಚರಣೆ ಮತ್ತು ಪ್ರಾರ್ಥನೆಗೆ ಮಾತ್ರ ಅನುಮತಿಸಿದೆ. ಉಳಿದಂತೆ ಭಕ್ತಾಧಿಗಳು ಮತ್ತು ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿಭರ್ಂಧಿಸಲಾಗಿದೆ.
ಕೋವಿಡ್-19 ನಿರ್ವಹಣೆಯ ಕ್ರಮಗಳನ್ನು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ.