ಚಾಮರಾಜನಗರಕ್ಕೆ ಆಕ್ಸಿಜನ್ ಸಿಲಿಂಡರ್: ಮೈಸೂರು ಜಿಲ್ಲಾಡಳಿತದಿಂದ ಮಾಹಿತಿ

ಮೈಸೂರು: ಮೈಸೂರಿನಿಂದ ಚಾಮರಾಜನಗರಕ್ಕೆ ನಿನ್ನೆ ರಾತ್ರಿ 12.30 ರವರೆಗೂ ಒಟ್ಟು 250 ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ ಎಂದು ಮಯಸುರು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಆಕ್ಸಿಜನ್ ಲಿಕ್ವಿಡ್ ಬಳ್ಳಾರಿ ಯಿಂದ ಚಾಮರಾಜನಗರಕ್ಕೆ ಬರಬೇಕಿತ್ತು. ಅದು ಸರಿಯಾದ ಸಮಯದಲ್ಲಿ ಬಂದಿದ್ದೇಯಾ ಇಲ್ಲವೋ ಗೊತ್ತಿಲ್ಲ.
ಚಾಮರಾಜನಗರದವರ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಈ ವಿಚಾರದಲ್ಲಿ ಮೈಸೂರು ಜಿಲ್ಲಾಡಳಿತ ವಿಳಂಬ ಮಾಡಿಲ್ಲ. ನಾವು ಅಧಿಕೃತವಾಗಿ 250 ಆಕ್ಸಿಜನ್ ಸಿಲಿಂಡರ್ ನ್ನು ನಿನ್ನೆ ಮಧ್ಯರಾತ್ರಿಯ ವೇಳೆಗೆ ಕಳಿಸಿರೋದು ದಾಖಲೆಯಲ್ಲಿದೆ.
ಮೈಸೂರಿನ ಸೌತ್ರನ್ ಗ್ಯಾಸ್ ನಿಂದ 210 ಹಾಗೂ ಮೈಸೂರು ಜಿಲ್ಲಾ ಆಸ್ಪತ್ರೆಯಿಂದ 40 ಆಕ್ಸಿಜನ್ ಗ್ಯಾಸ್ ಸಿಲಿಂಡರ್ ಚಾಮರಾಜ ನಗರಕ್ಕೆ ನಿನ್ನೆ ಮಧ್ಯರಾತ್ರಿಯೆ ರವಾನೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾಡಳಿತ ಮಾಹಿತಿ ನೀಡಿದೆ.