ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ಸೋಂಕಿತ ಆತ್ಮಹತ್ಯೆ

ಮೈಸೂರು: ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ತನ್ವಿರ್ ಸೇಠ್ ನಗರ ವಾಸಿ ದೇವರಾಜು ಸಾವಿಗೆ ಶರಣಾಗಿರುವ ಕೋವಿಡ್ ಸೋಂಕಿತ.
ನಗರದ ಟ್ರಾಮ ಕೇರ್ ಸೆಂಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆಸ್ಪತ್ರೆಯಲ್ಲೇ ಭಾನುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ದೇವರಾಜು ಆಕ್ಸಿಜನ್ ಪೈಪ್ ನಿಂದ ಶೌಚಾಲಯದ ಕಿಟಕಿಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.