ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ: ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಠಿಯಿಂದ ಕೊರೊನಾ ವೈರಸ್ ಎರಡನೇ ಅಲೆ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಮೇ 10ರ ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲಾದ್ಯಂತ ಮುಂಜಾಗ್ರತಾ ಕ್ರಮವಾಗಿ ಕೋವಿಡ್-19ರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶಿಸಿದ್ದಾರೆ.
ಕೋವಿಡ್-19ರ ನಿರ್ವಹಣೆ ಕ್ರಮಗಳನ್ನು ಮತ್ತು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ, ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.