ವಾರದಲ್ಲಿ ಮೂರು ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ -ಸಚಿವ ಎಸ್. ಸುರೇಶ್ ಕುಮಾರ್

ಚಾಮರಾಜನಗರ: ಕೋವಿಡ್ ಸೋಂಕು ತಡೆಗಾಗಿ ಜಾರಿಗೊಳಿಸಲಾಗಿರುವ ಲಾಕ್ ಡೌನ್ ಅನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುμÁ್ಠನ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಇನ್ನು ಮುಂದೆ 3 ದಿನಗಳು ಮಾತ್ರ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ನಾಲ್ಕು ದಿನಗಳು ಸಂಪೂರ್ಣ ಲಾಕ್ ಡೌನ್ ಇರಲಿದೆ ಎಂದು ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ಜಿಲ್ಲಾ ಟಾಸ್ಕ್ ಫೆÇೀರ್ಸ್ ಸಭೆಯನ್ನು ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಸೋಂಕು ವ್ಯಾಪಕವಾಗಿ ಹರಡದಂತೆ ತಡೆಯಲು ಜಿಲ್ಲೆಯಲ್ಲಿ ಲಾಕ್ ಡೌನ್ ಅನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿ ಮಾಡಲು ಇಂದು ನಡೆದ ಜಿಲ್ಲಾ ಟಾಸ್ಕ್ ಫೆÇೀರ್ಸ್ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
ಈ ಪ್ರಕಾರ ವಾರದಲ್ಲಿ ಸೋಮವಾರದಿಂದ ಬುಧವಾರದ ವರೆಗೆ ಅಂದರೆ ಮೂರು ದಿನಗಳ ಕಾಲ ಮಾತ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಎಂದಿನಂತೆ ಜನರು ಖರೀದಿಸಲು ಅವಕಾಶವಿದೆ. ಗುರುವಾರದಿಂದ ಭಾನುವಾರದವರೆಗೆ ಅಂದರೆ ನಾಲ್ಕು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಇರುತ್ತದೆ. ಈ ನಾಲ್ಕು ದಿನಗಳ ಅವಧಿಯಲ್ಲಿ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿರುವುದಿಲ್ಲ. ಆದರೆ ಔಷಧ ಅಂಗಡಿಗಳು, ಆಸ್ಪತ್ರೆ, ಮತ್ತಿತ್ತರ ವೈದ್ಯಕೀಯ ನೆರವಿಗೆ ಸಂಬಂಧಿಸಿದಂತೆ ತೆರಳಲು ಮಾತ್ರ ಅವಕಾಶವಿರುತ್ತದೆ ಎಂದರು.
ಚಾಮರಾಜನಗರದ ಜಿಲ್ಲಾ ಕೇಂದ್ರದಲ್ಲಿರುವ ಸಾರ್ವಜನಿಕ ಆಸ್ಪತ್ರೆ ಕೋವಿಡ್ ಚಿಕಿತ್ಸೆ ನೀಡುವ ಜಿಲ್ಲೆಯ ಏಕೈಕ ಪ್ರಧಾನ ಕೇಂದ್ರವಾಗಿದ್ದು, ಹೆಚ್ಚುವರಿ ಸೌಲಭ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿದೆ. ಪ್ರಸ್ತುತ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಯುಕ್ತ ಹಾಸಿಗೆಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು ಮನವಿ ಮಾಡಿದ್ದೇನೆ ಎಂದರು.
ಜಿಲ್ಲೆಯಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಶೇಖರಣೆ ಹೆಚ್ಚು ಅವಶ್ಯಕತೆ ಇದೆ. ಹೆಚ್ಚುವರಿ ಸಿಲಿಂಡರ್ ಗಳನ್ನು ಒದಗಿಸುವುದು ಹಾಗೂ ಜಿಲ್ಲೆಗೆ ನಿಗದಿ ಪಡಿಸಿರುವ ಆಕ್ಸಿಜನ್ ಪ್ರಮಾಣವನ್ನು 4.5 ಸಾವಿರ ಲೀಟರ್ ನಿಂದ 7.15 ಸಾವಿರ ಲೀಟರ್‍ಗೆ ನಿಗದಿ ಪಡಿಸಲು ಮನವಿ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ಅವರು ಹೇಳಿದರು.
ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಟಗರುಪುರ ವ್ಯಾಪ್ತಿಯ ಆಲಹಳ್ಳಿ ಗ್ರಾಮದಲ್ಲಿ ನಿಧನ ಹೊಂದಿದ ಮಹದೇವು ಎಂಬುವರ ಪಾರ್ಥಿವ ಶರೀರವನ್ನು ಸಾಗಿಸಿದ ಪ್ರಕರಣ ಸಂಬಂಧ ತನಿಖೆ ನಡೆಸಿ ನಾಳೆ ಮಧ್ಯಾಹ್ನದೊಳಗೆ ವರದಿ ನೀಡಲು ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಯವರಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಮರಣದ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ಅಧ್ಯಯನ ಮಾಡಲು ಜಿಲ್ಲಾಸ್ಪತ್ರೆಗೆ ಇತ್ತೀಚೆಗೆ ಭೇಟಿ ನೀಡಿದ್ದ ಪರಿಣಿತರ ತಂಡ ತನ್ನ ವರದಿಯನ್ನು ಈಗಾಗಲೇ ಆರೋಗ್ಯ ಇಲಾಖೆಗೆ ಸಲ್ಲಿಸಿದೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಪ್ರತಿನಿಧಿಗಳು ಈ ವರದಿಯ ಹಿನ್ನೆಲೆಯಲ್ಲಿ ವೈದ್ಯಕೀಯ ವ್ಯವಸ್ಥೆಗೆ ಮುಂದಿನ ದಿನಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿಡಿಯೋ ಸಂವಾದದ ಮೂಲಕ ಮನವರಿಕೆ ಮಾಡಿಕೊಡಲಿದೆ ಎಂದು ಸಚಿರಾದ ಎಸ್. ಸುರೇಶ್ ಕುಮಾರ್ ಅವರು ಹೇಳಿದರು.