ಮೈಸೂರು: ಸಂಸದ ಪ್ರತಾಪ್ ಸಿಂಹ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಸಂಸದ ಪ್ರತಾಪ್ ಸಿಂಹ ಅವರೇ ಈ ವಿಷಯವನ್ನು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
ನಾನು ಶ್ರೀ ಶಾಂತವೇರಿ ಗೋಪಾಲ್ ಗೌಡ ಆಸ್ಪತ್ರೆಯಲ್ಲಿ ರೋಗಿಯನ್ನು ನೋಡಲು ಹೋಗಿದ್ದೆ.
ನಂತರ ಆಂಟಿಜೆನ್ ಟೆಸ್ಟ್ ಮಾಡಿಸಿದೆ. ಅದರಲ್ಲಿ ನೆಗೆಟಿವ್ ಬಂದಿತ್ತು. ಆದರೂ ನಾನು ಆರ್‍ಟಿಪಿಸಿಆರ್ ಮಾಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ನನಗೆ ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಸೋಂಕು ಡೃಢಪಟ್ಟಿದೆ ಎಂದವರು ಟ್ವಿಟ್ ಮಾಡಿ ತಿಳಿಸಿದ್ದಾರೆ.
ನನ್ನೊಂದಿಗೆ ಸಂಪರ್ಕ ಹೊಂದಿದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ, ಪ್ರತ್ಯೇಕವಾಗಿರಿ ಎಂದು ಪ್ರತಾಪ್ ಸಿಂಹ ಅವರು ಟ್ವೀಟ್ ನಲ್ಲಿ ಮನವಿ ಮಾಡಿದ್ದಾರೆ.