ಕೋವಿಡ್ ಸೋಂಕಿತರ ಆರೋಗ್ಯ ಮಾಹಿತಿಗೆ ಸಹಾಯವಾಣಿ

ಚಾಮರಾಜನಗರ: ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ಕೋವಿಡ್ ಸೋಂಕಿತರ ಆರೋಗ್ಯ ಮಾಹಿತಿ ಪಡೆಯಲು ಸಂಬಂಧಿಕರು ಹಾಗೂ ಅವರ ಅವಲಂಬಿತರಿಗಾಗಿ ಸಹಾಯವಾಣಿಯನ್ನು ಆರಂಭಿಸಲಾಗಿದೆ.
ಸಹಾಯವಾಣಿ ಸಂಖ್ಯೆ 08226-222107, 08226-222108 ಹಾಗೂ 08226-222109 ಸಂಪರ್ಕಿಸಿ ಕೋವಿಡ್ ಸೋಂಕಿತರ ಆರೋಗ್ಯ ಸಂಬಂಧ ಮಾಹಿತಿ ಪಡೆಯಬಹುದೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.