ಮೈಸೂರು: ಎರಡು ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕ ಕೊರೊನಾ ಸೋಂಕಿಗೆ ಬಲಿಯಾಗಿರುವ ದುರ್ಘಟನೆ ನಡೆದಿದೆ.
ನಗರದ ಹೆಬ್ಬಾಳು ವಾಸಿ ನವೀನ್ (31) ಕೊರೊನಾಗೆ ಬಲಿ ಆದ ಯುವಕ.
ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ನವೀನ್ ಗೆ ಮಾ. 7ರಂದು ನಿಶ್ಚಿತಾರ್ಥವಾಗಿತ್ತು. ಮೇ 19 ಮತ್ತು 20ಕ್ಕೆ ವಿವಾಹ ನಿಶ್ಚಯವಾಗಿತ್ತು.
ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನವೀನ್ ಕೋವಿಡ್ ಪರೀಕ್ಷೆಗೆ ಒಳಗಾದಾಗ ಸೋಂಕಿರುವುದು ದೃಢಪಟ್ಟಿತ್ತು. ಉಸಿರಾಟದ ತೊಂದರೆಯಿಂದಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ನವೀನ್ ಸಾವನ್ನಪ್ಪಿದ್ದಾರೆ.
ಮೃತ ನವೀನ್ ಅಣ್ಣ-ಅತ್ತಿಗೆಗೂ ಕೋವಿಡ್ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.