ಕಾಟನೂರು ಹಳ್ಳಿಯಂತೆ ಇತರ ಹಳ್ಳಿಗಳೂ ಮಾದರಿ ಹಳ್ಳಿಗಳಾಗಬೇಕು -ಎಸ್.ಟಿ.ಸೋಮಶೇಖರ್

ಮೈಸೂರು: ನಂಜನಗೂಡು ತಾಲ್ಲೂಕಿನ ಕಾಟನೂರು ಸೇರಿದಂತೆ ಎರಡು ಹಳ್ಳಿಗಳಿ ಕೋವಿಡ್ ಪ್ರಕರಣಗಳು ಒಂದು ದಾಖಲಾಗಿಲ್ಲ. ಇವುಗಳು ಮಾದರಿ ಹಳ್ಳಿಗಳಾದ ಕಾರಣ ಮುಂದಿನವಾರ ಈ ಎರಡು ಹಳ್ಳಿಗಳಿಗೆ ಭೇಟಿ ನೀಡಿ ಇತರ ಹಳ್ಳಿಗಳೂ ಇದೇ ಮಾದರಿಯಲ್ಲಿ ಜಾಗೃತವಾಗುವಂತೆ ಅರಿವು ಮೂಡಿಸುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ನಂಜನಗೂಡಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ತಾಲ್ಲೂಕು ಪಂಚಾಯಿತಿಯಲ್ಲಿ ನಡೆದ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ನಂಜನಗೂಡಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದರೂ, ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಆದರೂ ಇಲ್ಲಿನ ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ನಂಜನಗೂಡಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸಿಎಸ್ ಆರ್ ಫಂಡ್ ಅಡಿಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ಬಗ್ಗೆ ಈಗಾಗಲೇ ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರು ಸಭೆಗಳನ್ನು ನಡೆಸಿದ್ದಾರೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ವರುಣಾ ವಿಧಾನಸಭಾ ಕ್ಷೇತ್ರದ ಕೊಂತಯ್ಯನ ಹುಂಡಿ ಮತ್ತು ಕೂಡ್ಲೂರು ಕೋವಿಡ್ ಕೇಂದ್ರಗಳಿಗೆ ಬೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದರು.
ಬಳಿಕ ಮಾತನಾಡಿದ ಅವರು, ಕೊಂತಯ್ಯನ ಹುಂಡಿ ಹಾಗೂ ತಗಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಆಕ್ಸಿಜನ್ ಕೊರತೆ, ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆಯು ಕಂಡುಬಂದಿದ್ದು, ಈಗಾಗಲೇ ವೈದ್ಯರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ನಿಮ್ಮ ಕ್ಷೇತ್ರದಲ್ಲಿ ಇರುವ ವೈದ್ಯರನ್ನೂ ಸಹ ಕರೆದುಕೊಳ್ಳಲು ತಿಳಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಹರ್ಷವರ್ದನ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಸಿ.ಬಿ.ರಿಷ್ಯಂತ್, ತಹಶೀಲ್ದಾರ್ ಮೋಹನ್ ಕುಮಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಈಶ್ವರ್ ಸೇರಿದಂತೆ ಇತರರು ಹಾಜರಿದ್ದರು.