ಕೊಳ್ಳೇಗಾಲದ ಯುವತಿ ಭಾರತ ವಾಯು ದಳದ ಮೊಟ್ಟ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್

ಚಾಮರಾಜನಗರ: ಕೊಳ್ಳೇಗಾಲ ಪಟ್ಟಣದ ಯುವತಿಯೊಬ್ಬರು ಈಗ ಭಾರತ ವಾಯು ದಳದ ಮೊಟ್ಟ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿ ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಕೊಳ್ಳೇಗಾಲ ಪಟ್ಟಣದ ವೆಂಕಟೇಶ್ವರ ಜ್ಯೂಯಲರ್ಸ್ ಮಾಲೀಕ ಒ.ವಿ ವೆಂಕಟೇಶ್ ಬಾಬು ಹಾಗೂ ಒ.ವಿ ವಾಣಿ ದಂಪತಿಯ ಪುತ್ರಿ ಆಶ್ರಿತಾ ವಿ ಒಲೆಟಿ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿ ಆಯ್ಕೆಯಾದವರಾಗಿದ್ದಾರೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಪಟ್ಟಣದ ವಾಸವಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದು, ಪಿಯುಸಿ ವಿದ್ಯಾಭ್ಯಾಸವನ್ನು ಮೈಸೂರಿನಲ್ಲಿ ಹಾಗೂ ಇಂಜಿನಿಯರ್ ಪದವಿಯನ್ನು ಬೆಂಗಳೂರಿನಲ್ಲಿ ಪಡೆದುಕೊಂಡು, ನಂತರ ಖಾಸಗಿ ಕಂಪನಿಯಲ್ಲಿ ಯುಜಿಸಿ ಯೂರೂಟೆಕ್‍ನಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಏರ್‍ಪೆÇೀರ್ಸ್ ತರಬೇತಿಗೆ ದಾಖಲಾದರು.
ಆಶ್ರಿತಾ ವಿ ಒಲೆಟಿ ಅವರು ಇಡೀ ಪ್ರಪಂಚದಲ್ಲಿರುವ ಏಳು ವಿಶ್ವವಿದ್ಯಾಲಯಗಳ ಪೈಕಿ ಒಂದಾಗಿರುವ ಭಾರತದ ಪ್ರತಿಷ್ಠಿತ ಏರ್ ಫೆÇೀರ್ಸ್ ಟೆಸ್ಟ್ ಪೈಲಟ್ ಸ್ಕೂಲ್‍ನಿಂದ ಪದವಿಯನ್ನು ಪಡೆದುಕೊಂಡಿದ್ದಾರೆ. 1976ರಲ್ಲಿ ಸ್ಥಾಪನೆಯಾದಾಗಿನಿಂದ ಈವರೆಗೆ ಕೇವಲ 275 ಪದವೀದರರು ಮಾತ್ರ ಈ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದು, ಆಶ್ರಿತಾ ಒಲೆಟಿ ಅತ್ಯಂತ ಕಠಿಣ ತರಬೇತಿಗಳನ್ನು ಒಳಗೊಂಡಿರುವ ಈ ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಭಾರತೀಯ ವಾಯು ದಳದ ಮೊಟ್ಟ ಮೊದಲ ಮಹಿಳಾ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.