ಕೋವಿಡ್ 3ನೇ ಅಲೆಗೆ ಸಿದ್ದತೆ, ಕೋವಿಡ್ ಕೇರ್ ಸೇಂಟರ್ ಗಳಿಗೆ ಸೋಂಕಿತರ ದಾಖಲು ಕಡ್ಡಾಯ

ಚಾಮರಾಜನಗರ: ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗಾಗಿ 100 ಹಾಸಿಗೆಯುಳ್ಳ ಆಸ್ಪತ್ರೆ, ಗ್ರಾಮೀಣ ಭಾಗಗಳಲ್ಲಿ ಸೋಂಕು ತಡೆಗಾಗಿ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲು, ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳಲ್ಲಿ ಪರಿಣಾಮಕಾರಿಯಾಗಿ ಕೋವಿಡ್ ಮುಕ್ತ ಗ್ರಾಮ ಗುರಿಗೆ ಕೋವಿಡ್ ಕ್ಯಾಪ್ಟನ್ ಆಂದೋಲನ, ಹಣ್ಣು ತರಕಾರಿ ಮಾರಾಟ ಅವಧಿ ಕಡಿತ ಸೇರಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಟಾಸ್ಕ್ ಪೆÇೀರ್ಸ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಗುಂಡ್ಲುಪೇಟೆ ತಾಲೂಕು ಕಚೇರಿಯಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರು ಗೂಗಲ್ ಮೀಟ್ ಮೂಲಕ ನಡೆಸಿದ ಜಿಲ್ಲಾಮಟ್ಟದ ಟಾಸ್ಕ್ ಪೆÇೀರ್ಸ್ ಸಭೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣ ಸಂಬಂಧ ಜಿಲ್ಲೆಯ ಶಾಸಕರು ಹಾಗೂ ನೋಡಲ್ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಾತನಾಡಿ ಕೋವಿಡ್ 3ನೇ ಅಲೆಯಲ್ಲಿ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಬಹುದೆಂದು ತಜ್ಞರು ಎಚ್ಚರಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಈ ಉದ್ದೇಶಕ್ಕಾಗಿಯೇ ಮಕ್ಕಳ ಚಿಕಿತ್ಸೆಗಾಗಿ ಪ್ರತ್ಯೇಕ ಆಸ್ಪತ್ರೆಯನ್ನು ಗುರುತಿಸಿ ಹಾಸಿಗೆಗಳನ್ನು ಕಾಯ್ದರಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
3ನೇ ಅಲೆಯ ಸಂದರ್ಭವನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸಿದ್ದತೆ ಮಾಡಬೇಕು. ವೈದ್ಯಕೀಯ ಕಾಲೇಜಿನ ಡೀನ್ ಅವರು 3ನೇ ಅಲೆಯ ಕುರಿತು ವಿವರವಾಗಿ ಅಧ್ಯಯನ ಮಾಡಿ ಮುಂದಿನ ಟಾಸ್ಕ್ ಪೆÇೀರ್ಸ್ ಸಭೆಯ ವೇಳೆಗೆ ಸ್ಪಷ್ಟ ಚಿತ್ರಣ ನೀಡುವಂತೆ ಉಸ್ತುವಾರಿ ಸಚಿವರು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವರ ನೀಡಿದ ಜಿಲ್ಲಾಧಿಕಾರಿಯವರಾದ ಡಾ. ಎಂ.ಆರ್. ರವಿ ಅವರು ಈಗಾಗಲೇ ವೈದ್ಯಕೀಯ ಕಾಲೇಜಿನ ನಾಲ್ವರು ಮಕ್ಕಳ ತಜ್ಞರ ತಂಡ 3ನೇ ಅಲೆ ಸಂಬಂಧ ಅಧ್ಯಯನ ಮಾಡಲು ಸೂಚಿಸಲಾಗಿದೆ. ವೈದ್ಯಕೀಯ ಕಾಲೇಜಿನ ನೂತನ ಆಸ್ಪತ್ರೆಯ ಕಟ್ಟಡಕ್ಕೆ ಹೆರಿಗೆ ಶಿಶು ಆರೈಕೆ ವಿಭಾಗ ಸ್ಥಳಾಂತರವಾಗುತ್ತಿದೆ. ಈ ಕಟ್ಟಡದ ಮೇಲ್ಭಾಗದಲ್ಲಿಯೇ 100 ಹಾಸಿಗೆಗಳ ಮಕ್ಕಳ ವಿಭಾಗವನ್ನು ಸಿದ್ದಪಡಿಸಬಹುದಾಗಿದೆ. ಇದರ ಜೊತೆಗೆ ಮಕ್ಕಳಿಗಾಗಿಯೇ ಕೋವಿಡ್ ಕೇರ್ ಕೇಂದ್ರವನ್ನು ಮಾಡುವ ಸಂಬಂಧ ಕ್ರಮ ವಹಿಸಬಹುದಾಗಿದೆ ಎಂದರು.
ಸೋಂಕು ತಡೆಗಾಗಿ ಹೋಂ ಐಸೋಲೇಷನ್ ಗೆ ಅವಕಾಶ ನೀಡದೇ ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲಿಸಬೇಕೆಂಬ ಮಹತ್ವರ ತೀರ್ಮಾನವನ್ನು ಕಳೆದ ಟಾಸ್ಕ್ ಪೆÇೀರ್ಸ್ ಸಮಿತಿ ಸಭೆಯಲ್ಲಿ ಕೈಗೊಂಡ ಪರಿಣಾಮ 400 ಹಾಸಿಗೆಗಳμÉ್ಟೀ ಭರ್ತಿಯಾಗಿದ್ದ ಕೋವಿಡ್ ಕೇರ್ ಸೇಂಟರ್ ಗಳಲ್ಲಿ ಇಂದು ಪ್ರಸ್ತುತ 1 ಸಾವಿರಕ್ಕೂ ಹೆಚ್ಚು ಸೋಂಕಿತರು ಇದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ಶೇ. 70ರಷ್ಟು ಸೋಂಕು ಹರಡುತ್ತಿದ್ದು, ನಗರ ಪ್ರದೇಶಗಳಲ್ಲಿ ಸೋಂಕಿತರ ಪ್ರಮಾಣ ಶೇ. 30ರಷ್ಟಿದೆ. ಹೀಗಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಹೋಂ ಐಸೋಲೇಷನ್ ಗೆ ಅವಕಾಶ ನೀಡದೇ ಕಡ್ಡಾಯವಾಗಿ ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲು ಮಾಡುವ ಪ್ರಕ್ರಿಯೆಯನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಅನುಸರಿಸಬೇಕೆಂಬ ಒಮ್ಮತದ ನಿರ್ಧಾರವನ್ನು ಕಾರ್ಯಪಡೆ ಕೈಗೊಂಡಿತು.
ಗ್ರಾಮಾಂತರ ಪ್ರದೇಶಗಳಲ್ಲಿ ಸೋಂಕು ವ್ಯಾಪಿಸುವುದನ್ನು ಪರಿಣಾಮಕಾರಿಯಾಗಿ ತಡೆಯಲು ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳಿಗೂ ಕೋವಿಡ್ ಕ್ಯಾಪ್ಟ ನ್ ಗಳನ್ನಾಗಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ.
ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್ ಅವರು ಮಾತನಾಡಿ ಕೋವಿಡ್ ನಿಯಂತ್ರಣ ಸಂಬಂಧ ವಿಸ್ತøತವಾಗಿ ತಮ್ಮ ಅಭಿಪ್ರಾಯ, ಸಲಹೆಗಳನ್ನು ನೀಡಿದರು.
ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ದಿವ್ಯಾ ಸಾರಾ ಥಾಮಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಉಪವಿಭಾಗಾಧಿಕಾರಿ ಡಾ. ಗಿರೀಶ್ ದಿಲೀಪ್ ಬಡೋಲೆ, ಜಿಲ್ಲಾ ಆರೋಗ್ಯ ಮತ್ತು ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ವೈದ್ಯಕೀಯ ಕಾಲೇಜಿನ ಡೀನ್ ಡಾ. ಸಂಜೀವ್, ನೋಡಲ್ ಅಧಿಕಾರಿಗಳಾದ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಬಿ.ಆರ್.ಟಿ ಕ್ಷೇತ್ರ ನಿರ್ದೇಶಕರಾದ ಡಾ. ಸಂತೋಶ್ ಕುಮಾರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೊನ್ನೇಗೌಡ, ತಹಶೀಲ್ದಾರ್ ರವಿಶಂಕರ್ ಸೇರಿದಂತೆ ಇತರೆ ಅಧಿಕಾರಿಗಳು ಪಾಲ್ಗೊಂಡರು.