ಒಂದೇ ಕುಟುಂಬದ ನಾಲ್ವರು ಸಾವು

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ: ಒಂದೇ ಕುಟುಂಬದ ನಾಲ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಪೂರ್ವ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೂಕಳ್ಳಿ ಗ್ರಾಮದ ಮಹದೇವಸ್ವಾಮಿ (50), ಮಂಗಳಮ್ಮ (40), ಗೀತಾ (16)ಮತ್ತು ಶೃತಿ (11) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಒಂದೇ ಕುಟುಂಬದ ನಾಲ್ವರು ನೇಣಿಗೆ ಬಿಗಿದುಕೊಂಡು ಸಾವನ್ನಪ್ಪಿದ್ದು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಡಿವೈಸ್ಪಿ ಪ್ರಿಯದರ್ಶಿನಿ, ಗ್ರಾಮಾಂತರ ಸಬ್ ಇನ್ಸ್ ಪೆಕ್ಟರ್ ರವಿಕುಮಾರ್ ಸೇರಿದಂತೆ ಇನ್ನಿತರ ಪೊಲೀಸ್ ಅಧಿಕಾರಿಗಳು ಹಾಜರಾಜಿ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.