ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ತಗ್ಗಿಸುವುದು, ಪರೀಕ್ಷೆ ಸಂಖ್ಯೆಯಲ್ಲಿ ಹೆಚ್ಚಳ ಹಾಗೂ ಲಸಿಕೆ ನೀಡುವ ಕಾರ್ಯದಲ್ಲಿ ಪ್ರಗತಿ ಸಾಧಿಸಲು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಟಾಸ್ಕ್ ಫೆÇೀರ್ಸ್ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು.
ಕೊಳ್ಳೇಗಾಲ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಜಿಲ್ಲಾ ಮಟ್ಟದ ಟಾಸ್ಕ್ ಫೆÇೀರ್ಸ್ ಸಭೆಯನ್ನು ಗೂಗಲ್ ಮೀಟ್ ಮೂಲಕ ಉಸ್ತುವಾರಿ ಸಚಿವರು ನಡೆಸಿದರು.
ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಕಡಿಮೆಯಾಗುತ್ತಿದ್ದು ಇನ್ನಷ್ಟು ಗಣನೀಯವಾಗಿ ತಗ್ಗಿಸಬೇಕಿದೆ. ಅಂದರೆ ಶೇ. 5ಕ್ಕಿಂತ ಕಡಿಮೆಯಾಗಬೇಕಿದೆ. ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಡೆಸಬೇಕು. ಲಸಿಕೆ ನೀಡುವ ಕಾರ್ಯವನ್ನು ವ್ಯಾಪಕಗೊಳಿಸಿ ಹೆಚ್ಚು ಗುರಿ ಸಾಧನೆ ಮಾಡಬೇಕು ಎಂಬ ಬಗ್ಗೆ ವಿವರವಾಗಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಾತನಾಡಿ, ಕೋವಿಡ್ ಧೃಢ ಪ್ರಮಾಣ ಜಿಲ್ಲೆಯಲ್ಲಿ ಇಂದಿನ ಅಂಕಿ ಅಂಶಗಳನ್ನು ವಿಶ್ಲೇಷಿಸಿದ ಬಳಿಕ ಶೇ. 8.6ರಷ್ಟು ಇರುವುದಾಗಿ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯಲ್ಲೂ ಲಾಕ್ ಡೌನ್ ಕಠಿಣ ನಿಯಮಗಳು ಯಥಾಸ್ಥಿತಿಯಲ್ಲಿ ಇದೇ ಜೂ. 21ರ ವರೆಗೆ ಮುಂದುವರೆಯುತ್ತಿದೆ. ಲಾಕ್‍ಡೌನ್ ನಿಬರ್ಂಧ ಸಡಿಲಿಕೆಯಾಗಲು ಪಾಸಿಟಿವಿಟಿ ಪ್ರಮಾಣ ಶೇ. 5ಕ್ಕಿಂತ ಕಡಿಮೆ ಗೊಳಿಸಲೇಬೇಕಿದೆ. ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಅನುμÁ್ಠನಗೊಳಿಸಬೇಕು ಎಂದು ಸೂಚಿಸಿದರು.
ಕೋವಿಡ್ ಪರೀಕ್ಷೆ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ಈಗಾಗಲೇ ನಿಗದಿಯಾಗಿರುವ ಗಂಟಲು ಮಾದರಿ ದ್ರವ ಸಂಗ್ರಹಣ ಕೇಂದ್ರಗಳಲ್ಲಿಯೂ ಹೆಚ್ಚು ಮಾದರಿಗಳನ್ನು ಸಂಗ್ರಹಿಸಬೇಕು. ಅಲ್ಲದೇ ಮೊಬೈಲ್ ವಾಹನಗಳ ಮೂಲಕವೂ ಮಾದರಿ ಸಂಗ್ರಹಣೆ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಿ ಪರೀಕ್ಷೆಯನ್ನು ಹೆಚ್ಚು ನಡೆಸಬೇಕು. ಇದರಿಂದ ಸೋಂಕು ಹರಡುವಿಕೆ ತಡೆಯಲು ಸಾಧ್ಯವಾಗಲಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಕೋವಿಡ್ ಲಸಿಕೆ ನೀಡುವ ಕಾರ್ಯ ಜಿಲ್ಲೆಯ ಎಲ್ಲೆಡೆ ಹೆಚ್ಚಾಗಿ ನಡೆಯಬೇಕಿದೆ. ಇದಕ್ಕಾಗಿ ಇನ್ನಷ್ಟು ಸುವ್ಯವಸ್ಥಿತ ಯೋಜನೆಗಳೊಂದಿಗೆ ಲಸಿಕೆಯನ್ನು ಹೆಚ್ಚು ಜನರು ಪಡೆಯುವಂತಾಗಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಲಸಿಕೆಯ ಮಹತ್ವದ ಬಗ್ಗೆ ಮನವರಿಕೆ ಮಾಡಿಕೊಡುವ ಕೆಲಸ ಯಶಸ್ವಿಯಾಗಿ ಕೈಗೊಳ್ಳಬೇಕು. ಲಸಿಕೆ ನೀಡಲು ಆಯಾ ಸ್ಥಳೀಯ ಯುವ ಜನರು, ಮುಖಂಡರು, ಸಮುದಾಯಗಳ ಪ್ರತಿನಿಧಿಗಳ ಸಹಕಾರ ಪಡೆಯಬೇಕೆಂದರು.
ವಿಶೇಷ ಆಂದೋಲನ ಮಾದರಿಯಲ್ಲಿ ಲಸಿಕೆ ನೀಡುವ ಪ್ರಕ್ರಿಯೆ ಮುಂದುವರೆಯಬೇಕು. ಆದ್ಯತಾ ವಲಯಗಳ ಗುಂಪುಗಳು ಎಲ್ಲಾ ವರ್ಗದ ನಾಗರಿಕರು ಲಸಿಕೆ ಪಡೆಯಲು ಶಿಬಿರಗಳನ್ನು ಆಯೋಜನೆ ಮಾಡಬೇಕು. ಲಸಿಕೆ ಬಗ್ಗೆ ಕೆಲವರಲ್ಲಿ ಇರುವ ತಪ್ಪು ಕಲ್ಪನೆ ಹೋಗಲಾಡಿಸಿ ಜಾಗೃತಿ ಮೂಡಿಸುವ ಕಾರ್ಯವು ಆಗಬೇಕು. ಒಟ್ಟಾರೆ ಲಸಿಕೆ ಪ್ರಗತಿಯಲ್ಲಿ ಗಣನೀಯವಾಗಿ ಏರಿಕೆಯಾಗಬೇಕು ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಇದೇ ವೇಳೆ ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರಬಹುದೆಂಬ ತಜ್ಞರ ಅಭಿಪ್ರಾಯಗಳ ಹಿನ್ನಲೆಯಲ್ಲಿ ಜಿಲ್ಲೆಯಲ್ಲೂ ಈ ಕುರಿತು ಜಿಲ್ಲಾ ಟಾಸ್ಕ್ ಫೆÇೀರ್ಸ್ ಈ ಹಿಂದೆ ನೀಡಿದ್ದ ಸೂಚನೆ ಅನುಸಾರ ಜಿಲ್ಲಾ ವೈದ್ಯರು ನೀಡಿರುವ ವರದಿಯನ್ನು ಇಂದಿನ ಸಭೆಯಲ್ಲಿ ಮಂಡಿಸಲಾಯಿತು.
ಕೋವಿಡ್ ಚಿಕಿತ್ಸೆ ಆರೈಕೆಯಲ್ಲಿರುವವರ ನಿಗಾವಣೆ, ಸಕ್ರಿಯ ಪ್ರಕರಣಗಳು, ಲಾಕ್ ಡೌನ್ ನಿಯಮಗಳ ಅನುμÁ್ಠನ ಸೇರಿದಂತೆ ಕೋವಿಡ್ ನಿಯಂತ್ರಣ ಕುರಿತು ವಿವರವಾಗಿ ಸಭೆಯಲ್ಲಿ ಸಮಾಲೋಚಿಸಲಾಯಿತು. ಶಾಸಕರು, ಅಧಿಕಾರಿಗಳು ಅಭಿಪ್ರಾಯ, ಸಲಹೆಗಳನ್ನು ವ್ಯಕ್ತಪಡಿಸಿದರು.
ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನ್ ಕುಮಾರ್, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ದಿವ್ಯಾ ಸಾರಾ ಥಾಮಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಹರ್ಷಲ್ ಬೋಯರ್ ನಾರಾಯಣ್ ರಾವ್, ಉಪವಿಭಾಗಾಧಿಕಾರಿ ಡಾ. ಗಿರೀಸ್ ದಿಲೀಪ್ ಬದೋಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ವೈದ್ಯಕೀಯ ಕಾಲೇಜಿನ ಡೀನ್ ಡಾ. ಸಂಜೀವ್, ಜಿಲ್ಲಾ ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ. ಮಹೇಶ್, ಆರ್.ಸಿ.ಹೆಚ್. ಅಧಿಕಾರಿ ಡಾ. ವಿಶ್ವೇಶ್ವರಯ್ಯ, ತಹಶೀಲ್ದಾರ್ ಕೆ. ಕುನಾಲ್, ನೋಡಲ್ ಅಧಿಕಾರಿಗಳಾದ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಮತ್ತಿತ್ತರು ಸಭೆಯಲ್ಲಿ ಹಾಜರಿದ್ದರು.