ಚಿತ್ರದುರ್ಗ: ಸಿದ್ದರಾಮಯ್ಯನವರು ಕೊಟ್ಟ ಮಾತು ತಪ್ಪಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಅವರು ಶಿವಕುಮಾರ್ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಗುರುವಾರ ಡಿ.ಕೆ. ಶಿವಕುಮಾರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯನವರು ಅವರ ಅಧಿಕಾರ ಅವಧಿಯಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದಾರೆ. ಅವರು ಪ್ರಮಾಣ ವಚನ ಸ್ವೀಕರಿಸಿ ಕೊಟ್ಟ ಮಾತನ್ನು ಶೇ.. 99ರಷ್ಟು ಉಳಿಸಿಕೊಂಡಿದ್ದಾರೆಂದರು.
ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಅಧ್ಯಕ್ಷರಾಗಿದ್ದಾರೆ, ಯಾವುದಾದರೂ ಮಾಧ್ಯಮದ ವೇದಿಕೆಯಲ್ಲಿ ಬರಲಿ. ನಾನು ಈ ವಿಚಾರವಾಗಿ ಅವರ ಜತೆ ಚರ್ಚೆ ಮಾಡುತ್ತೇನೆ ಎಂದು ಡಿಕೆಶಿ ತಿಳಿಸಿದರು.
ಇನ್ನು ಕಾಂಗ್ರೆಸ್ ನಲ್ಲಿ ಈಗಲೇ ಮ್ಯೂಸಿಕಲ್ ಚೇರ್ ಆಟ ನಡೆಯುತ್ತಿದೆ ಹಾಗೂ ಸಿದ್ದರಾಮಯ್ಯ ರಾಜ್ಯ ಕಂಡ ಮಹಾ ಮೋಸಗಾರ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ ಅವರು, ಕಾಂಗ್ರೆಸ್ ನಲ್ಲಿ ಮ್ಯೂಸಿಕಲ್ ಚೇರ್ ಆಡುತ್ತಿದ್ದೇವೋ, ಬೇರೆ ಆಡುತ್ತಿದ್ದೇವೋ.., ಆದರೆ ಅವರ ಪಕ್ಷದಲ್ಲಿ ಆಡುತ್ತಿರುವ ಆಟವನ್ನು ಏನೆಂದು ಕರೆಯುತ್ತಾರೆ? ರೆಂದರು.
ನೊಂದವರಿಗೆ ಧ್ವನಿಯಾಗಲು ಕಾಂಗ್ರೆಸ್ ಕಾರ್ಯಕ್ರಮ
ಕಳೆದೊಂದು ವರ್ಷದಿಂದ ಕೋವಿಡ್ ಸಮಯದಲ್ಲಿ ಪರಿಶಿಷ್ಟ ಜಾತಿ, ಪಂಗಡದವರು, ಗ್ರಾಮೀಣ ಪ್ರದೇಶಗಳಲ್ಲಿ ಸಾಂಪ್ರದಾಯಿಕ ವೃತ್ತಿ ಉಳಿಸಿಕೊಂಡು ಬಂದಿರುವ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಮಸ್ಯೆ ಆಲಿಸಿ ಅವರಿಗೆ ಧ್ವನಿಯಾಗಲು ಕಾಂಗ್ರೆಸ್ ಕಾರ್ಯಕ್ರಮ ರೂಪಿಸಿದ ಎಂದು ಡಿ.ಕೆ. ಅವರು ಶಿವಕುಮಾರ್ ತಿಳಿಸಿದ್ದಾರೆ.
ಶಿವಕುಮಾರ್ ಮಾತ್ರವಲ್ಲ ಇಡೀ ಕಾಂಗ್ರೆಸ್ ಪಕ್ಷ ಅವರ ಪರವಾಗಿ ಹೋರಾಡಲಿದೆ. ಇದು ಕೇವಲ ಕಾಂಗ್ರೆಸ್ ಕಾರ್ಯಕ್ರಮವಲ್ಲ. ನೊಂದ ಜನರಿಗೆ ಸಾಮೂಹಿಕವಾಗಿ ನಾವೆಲ್ಲ ಧ್ವನಿಯಾಗಿ ನಿಲ್ಲಲು, ಅವರಿಗೆ ಶಕ್ತಿ ತುಂಬಲು ಈ ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.