ಹೆಲಿಕಾಪ್ಟರ್ ಹಾರಾಟಕ್ಕೆ ಸಹಕರಿಸಿದ ಹವಾಮಾನ; ಮಾದೇಗೌಡರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ -ಡಿ.ಕೆ. ಶಿವಕುಮಾರ್

ವಿಜಯಪುರ: ಮಾಜಿ ಸಚಿವ ಜಿ. ಮಾದೇಗೌಡರ ಪಾರ್ಥಿವ ಶರೀರದ ದರ್ಶನ ಪಡೆದು ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಸಾಧ್ಯವಾಗತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬಂಜಾರ ಸಮುದಾಯದ ಸಮಸ್ಯೆ ಆಲಿಸುವ ಪೂರ್ವನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ವಿಜಯಪುರದ ಜಮಖಂಡಿಯಲ್ಲಿದ್ದೇನೆ. ಎಲ್ಲ ಕಾರ್ಯಕ್ರಮವನ್ನು ರದ್ದು ಮಾಡಿ ಹೆಲಿಕಾಪ್ಟರ್ ಮೂಲಕ ತೆರಳಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರಯತ್ನಿಸಿದೆ. ಆದರೆ ಹವಾಮಾನ ಹೆಲಿಕಾಪ್ಟರ್ ಹಾರಾಟಕ್ಕೆ ಪೂರಕವಾಗಿಲ್ಲ ಎಂದು ಪೈಲಟ್ ಹೇಳಿದ್ದಾರೆ. ರಸ್ತೆ ಮಾರ್ಗವಾಗಿ ಹೊರಟರೂ ಸಕಾಲಕ್ಕೆ ತಲುಪಲು ಆಗುವುದಿಲ್ಲ. ಆದ ಕಾರಣ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಇದು ನೋವಿನ ಸಂಗತಿ. ಆದರೆ ಹನ್ನೊಂದನೇ ದಿನದ ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ನಾನು ಮಾದೇಗೌಡರ ಪುತ್ರ ಮಧು ಮಾದೇಗೌಡ ಅವರ ಜತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಶ್ರೀ ರಾಹುಲ್ ಗಾಂಧಿ ಅವರು ಮಾದೇಗೌಡರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ನಾವು ಧೀಮಂತ ನಾಯಕನನ್ನು ಕಳೆದುಕೊಂಡಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದರು.